Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂಜಿಬೆಟ್ಟು – ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ‘ವಿಕಸಿತ ಭಾರತ ಯುವ ಸಂವಾದ’ ಆಚರಣೆ
    ಉಡುಪಿ ಜಿಲ್ಲೆ

    ಕುಂಜಿಬೆಟ್ಟು – ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ‘ವಿಕಸಿತ ಭಾರತ ಯುವ ಸಂವಾದ’ ಆಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಉಡುಪಿಯ ‘ಮೈ ಭಾರತ್’ (ಮೇರಾ ಯುವ ಭಾರತ್) ಸಹಯೋಗದೊಂದಿಗೆ, ಕುಂಜಿಬೆಟ್ಟುವಿನ ವೈಕುಂಠ ಬಾಳಿಗಾ ಕಾನೂನು ಕಾಲೇಜು ಮತ್ತು ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರದಲ್ಲಿ ಸಂವಿಧಾನ ದಿನಾಚರಣೆ 2026ರ ಅಂಗವಾಗಿ ‘ವಿಕಸಿತ ಭಾರತ ಯುವ ಸಂವಾದ’ಕಾರ್ಯಕ್ರಮವನ್ನು  ಅರ್ಥಪೂರ್ಣವಾಗಿ ಆಚರಿಸಲಾಯಿತು.

    Call us

    Click Here

    ಕಾರ್ಯಕ್ರಮವನ್ನು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಉಡುಪಿಯ ‘ಮೈ ಭಾರತ್ʼ ಉಪನಿರ್ದೇಶಕರಾದ ಉಲ್ಲಾಸ್ ಕೆ.ಟಿ.ಕೆ. ಅವರು ಉದ್ಘಾಟಿಸಿ, ಯುವಜನರನ್ನು ಉದ್ದೇಶಿಸಿ ಮಾತನಾಡಿ, ‘ವಿಕಸಿತ ಭಾರತ’ಪರಿಕಲ್ಪನೆಯ ಕುರಿತು ವಿವರಿಸಿ, ರಾಷ್ಟ್ರ ನಿರ್ಮಾಣದಲ್ಲಿ ಯುವ ಪೀಳಿಗೆಯ ಮಹತ್ವದ ಪಾತ್ರವನ್ನು ಒತ್ತಿ ಹೇಳಿದರು. ಅಲ್ಲದೆ, ‘ನಶಾ ಮುಕ್ತ ಭಾರತ’ (ಮಾದಕ ವ್ಯಸನ ಮುಕ್ತ ಭಾರತ) ಅಭಿಯಾನದಲ್ಲಿ ಯುವಜನರು ಸಕ್ರಿಯವಾಗಿ ಪಾಲ್ಗೊಳ್ಳುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಿದರು.

    ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ನವೀನ್ ಚಂದ್ರ ಸಿ.ಬಿ. ಅವರು ಸಂವಿಧಾನ ದಿನದ ಮಹತ್ವ ಮತ್ತು ಪ್ರಾಮುಖ್ಯತೆಯ ಕುರಿತು ಸವಿಸ್ತಾರವಾಗಿ ವಿವರಿಸಿದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದಿಂದ ನಾಮನಿರ್ದೇಶಿತಗೊಂಡ ‘ಯುವ ಐಕಾನ್’ ಸಾತ್ವಿಕ್ ಮೂಲ್ಯ ಅವರು, ‘ವಿಕಸಿತ ಭಾರತ’ನಿರ್ಮಾಣಕ್ಕಾಗಿ ವಿನೂತನ ಆಲೋಚನೆಗಳು ಹಾಗೂ ‘ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವಜನತೆ’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟು ಹಾಗೂ ಕ್ರೀಡಾ ಐಕಾನ್ ಸ್ತುತಿ ಶೆಟ್ಟಿ ಅವರು ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಸಮಾನವಾಗಿ ಯಶಸ್ಸು ಗಳಿಸುವ ಬಗೆಯ ಕುರಿತು ತಮ್ಮ ಅನುಭವ ಮತ್ತು ಮಾರ್ಗದರ್ಶನವನ್ನು ಹಂಚಿಕೊಂಡರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಖಾ ಕೆ. ಅವರು ಮಾತನಾಡಿ, ಯುವಜನರ ಸಬಲೀಕರಣಕ್ಕಾಗಿ ಇಂತಹ ಇನ್ನಷ್ಟು ಯುವ ಕೇಂದ್ರಿತ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

    Click here

    Click here

    Call us

    ಉಡುಪಿಯ ‘ಮೈ ಭಾರತ್’ಸಂಸ್ಥೆಯ ಶ್ಯಾಮಲಾ ಕಿರಣ್ ಅವರು ನೆರೆದಿದ್ದವರಿಗೆ ಭಾರತದ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ಪ್ರೀತಿ ಹರೀಶ್ ರಾಜ್, ಮಾನವಿಕ ವಿಭಾಗದ ಮುಖ್ಯಸ್ಥರಾದ ರೋಹಿತ್ ಎಸ್. ಅಮೀನ್, ಎನ್.ಎಸ್.ಎಸ್. (NSS) ಅಧಿಕಾರಿ ಅಮೋಘ ಗಾಡ್ಕರ್, ಕಾನೂನು ನೆರವು ಚಿಕಿತ್ಸಾಲಯದ ಸಂಯೋಜಕರಾದ ಈರಪ್ಪ ಎಸ್. ಮೇಧಾರ್ ಸೇರಿದಂತೆ ಬೋಧಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಪುನೀತ್ ಕುಮಾರ್ ಸ್ವಾಗತಿಸಿ, ಧನ್ವಿತಾ ಕಾರ್ಯಕ್ರಮ ನಿರೂಪಿಸಿದರು ಹಾಗೂ ಗಣೇಶ್ ಶ್ಯಾನುಭೋಗ್ ವಂದನಾರ್ಪಣೆ ಸಲ್ಲಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗುಣಮಟ್ಟದೊಂದಿಗೆ ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ರಿಜ್ವಾನ್ ಅರ್ಷದ್

    25/11/2026

    ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ರಿಜ್ವಾನ್ ಅರ್ಷದ್

    25/11/2026

    ಶಾಸ್ರ್ತೀಯ ಶಿಸ್ತು ಜಾನಪದ ಸ್ವಾತಂತ್ರ್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಸಾಮಗ

    21/11/2026
    Leave A Reply Cancel Reply

    nineteen − 8 =

    Call us

    Click Here

    Call us

    Call us

    Call us
    Highest Viewed Recently
    • ಕುಂಜಿಬೆಟ್ಟು – ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ‘ವಿಕಸಿತ ಭಾರತ ಯುವ ಸಂವಾದ’ ಆಚರಣೆ
    • ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ
    • ಕುಂದಾಪುರ ಸ.ಪ.ಪೂ ಕಾಲೇಜು: ಸಾಧಕ ಕನ್ನಡ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ
    • ಭಾರತ ಅಂಡರ್-19 ತಂಡಕ್ಕೆ ರಚಿತಾ ಹತ್ವಾರ್ ಆಯ್ಕೆ, ಕುಂದಾಪುರದ ಹುಡುಗಿಗೆ ಇಂಡಿಯಾ ಕ್ಯಾಪ್
    • ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ವಲಯಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.