Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಆರ್ಥಿಕ ನೆರವು ಕಲ್ಪಿಸಿ: ಜಿ.ಪಂ ಸಿಇಓ ಪ್ರತೀಕ್ ಬಾಯಲ್
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಆರ್ಥಿಕ ನೆರವು ಕಲ್ಪಿಸಿ: ಜಿ.ಪಂ ಸಿಇಓ ಪ್ರತೀಕ್ ಬಾಯಲ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಬ್ಯಾಂಕುಗಳು ಆರ್ಥಿಕ ನೆರವನ್ನು ಕಲ್ಪಿಸಿ ಹೆಚ್ಚು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು.

    Call us

    Click Here

    ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಜಿಲ್ಲಾ ಸಮಾಲೋಚನಾ ಸಮಿತಿ ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (ಪಿ.ಎಂ.ಎಫ್.ಎಂ.ಇ) ಯಡಿ ವಿವಿಧ ಘಟಕಗಳ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಸರಕಾರದ ವತಿಯಿಂದ 15 ಲಕ್ಷ ರೂ.ಗಳ ಅನುದಾನ ನೀಡಲಾಗುತ್ತಿದ್ದು, ಶೇ. 50 ರಷ್ಟು ಸಹಾಯಧನ ಸೌಲಭ್ಯ ಲಭ್ಯವಿದೆ. ಈ ಯೋಜನೆಯಡಿ ಸಹಾಯಧನ ಸೌಲಭ್ಯ ಪಡೆಯಲು ಯಾವುದೇ ಇಲಾಖೆಗೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಫಲಾಪೇಕ್ಷಿಗಳು ತಮ್ಮ ಮೊಬೈಲ್ ಮೂಲಕವೇ ಜಿಲ್ಲಾ ಸಂಪನ್ಮೂಲ ವ್ಯಕ್ತಿಗೆ ಅವಶ್ಯಕತೆ ದಾಖಲೆಗಳನ್ನು ಸಲ್ಲಿಸಿ, ಅವರ ಮಾರ್ಗದರ್ಶನದ ಅನುಸಾರ ಬ್ಯಾಂಕ್‌ಗಳಿಂದ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ಯೋಜನೆಯ ಹೆಚ್ಚು ಜನರು ಪ್ರಯೋಜನ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

    ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರಾಯೋಜಿತ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಬ್ಯಾಂಕುಗಳ ಪಾತ್ರ ಮಹತ್ವದ್ದಾಗಿದ್ದು, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಿ, ನಿಗಧಿತ ಗುರಿ ಸಾಧನೆಗೆ ಮುಂದಾಗಬೇಕು. ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಸಾರ್ವಜನಿಕರ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೇ ಆದ್ಯತೆಯ ಮೇಲೆ ಅವುಗಳ ವಿಲೇವಾರಿಗೆ ಗಮನಹರಿಸಬೇಕು ಎಂದರು.

    ಜಿಲ್ಲೆಯಲ್ಲಿನ ಎಲ್ಲಾ ಬ್ಯಾಂಕುಗಳ ವತಿಯಿಂದ 78,101.82 ಕೋಟಿ ರೂ. ನಷ್ಟು ವಹಿವಾಟು ನಡೆದಿದ್ದು, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಹೆಚ್ಚು ವಹಿವಾಟು ನಡೆದಿದೆ. ಕಳೆದ ವರ್ಷದ ಸೆಪ್ಟಂಬರ್ ಮಾಹೆಯಲ್ಲಿ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ.48.62 ಇದ್ದು, ಪ್ರಸ್ತುತ ಶೇ.49.32 ರಷ್ಟು ಏರಿಕೆಯಾಗಿದೆ. ಆರ್.ಬಿ.ಐ ನ ನಿಯಮಾನುಸಾರ ಸಿ.ಡಿ ಅನುಪಾತದ ಹೆಚ್ಚಿಸಲು ಎಲ್ಲಾ ಬ್ಯಾಂಕ್‌ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

    Click here

    Click here

    Call us

    ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಡಿವಿಜನಲ್ ಮ್ಯಾನೆಜರ್ ಅರ್ಚನಾ ಎನ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಗೆ ಪ್ರಸಕ್ತ ಸಾಲಿನಲ್ಲಿ ಆದ್ಯತೆಯ ಮತ್ತು ಆದ್ಯತೆಯೇತರ ವಲಯಗಳೆರಡಕ್ಕೂ ಒಟ್ಟಾರೆಯಾಗಿ 18,532.26 ಕೋಟಿ ರೂ.ಗಳ ವಾರ್ಷಿಕ ಕ್ರೆಡಿಟ್ ಯೋಜನೆ ಗುರಿಯನ್ನು ನಿಗದಿಪಡಿಸಲಾಗಿದ್ದು, 2026 ರ ಸೆಪ್ಟಂಬರ್ ಅಂತ್ಯದವರೆಗೆ 11,565.64 ಕೋಟಿ ರೂ. ಗುರಿ ಸಾಧಿಸಿ, ಶೇ. 62.41 ಸಾಧನೆ ಮಾಡಲಾಗಿದೆ ಎಂದರು.

    ಕೃಷಿ ವಲಯದಲ್ಲಿ 4,801.25 ಕೋಟಿ ರೂ. ನಿಗಧಿತ ಗುರಿಗೆ 2,644.45 ಕೋಟಿ ರೂ. ಗುರಿ ಸಾಧಿಸಿ ಶೇ.55.08, ಎಂ.ಎಸ್.ಎಂ.ಇ ವಲಯಕ್ಕೆ 4,192.82 ಕೋಟಿ ರೂ. ನಿಗಧಿತ ಗುರಿಗೆ 3,201.20 ಕೋಟಿ ರೂ. ಗುರಿ ಸಾಧಿಸಿ ಶೇ. 76.35 ರಷ್ಟು, ಶಿಕ್ಷಣ ವಲಯದಲ್ಲಿ 231.82 ಕೋಟಿ ರೂ. ನಿಗಧಿತ ಗುರಿಗೆ 142.58 ಕೋಟಿ ರೂ. ಗುರಿ ಸಾಧಿಸಿ ಶೇ. 61.51 ರಷ್ಟು, ವಸತಿ ಕ್ಷೇತ್ರಗಳಿಗೆ 264.54 ಕೋಟಿ ರೂ. ನಿಗಧಿತ ಗುರಿಗೆ 140.90 ಕೋಟಿ ರೂ. ಗುರಿ ಸಾಧಿಸಿ ಶೇ. 53.26 ರಷ್ಟು, ಇತರೆ ಕ್ಷೇತ್ರಗಳಿಗೆ 373.47 ಕೋಟಿ ರೂ. ನಿಗಧಿತ ಗುರಿಗೆ, 307.89 ಕೋಟಿ ರೂ. ಗುರಿ ಸಾಧಿಸಿ ಶೇ. 82.44 ಸೇರಿದಂತೆ ಒಟ್ಟು ಆದ್ಯತಾ ವಲಯಕ್ಕೆ 9,863.89 ನಿಗಧಿತ ಗುರಿಗೆ 6,437.03 ರಷ್ಟು ಗುರಿ ಸಾಧಿಸಿ ಶೇ. 65.26 ರಷ್ಟು ಸಾಧನೆ ಮಾಡಲಾಗಿದೆ. ಹಾಗೂ ಆದ್ಯತೇತರ ವಲಯಗಳಿಗೆ 8,668.37 ಕೋಟಿ ರೂ. ನಿಗಧಿತ ಗುರಿಗೆ, 5,128.61 ಕೋಟಿ ರೂ. ಗುರಿ ಸಾಧಿಸಿ ಶೇ. 59.16 ರಷ್ಟು ಸಾಧನೆ ಮಾಡಲಾಗಿದೆ ಎಂದರು.

    ಸಭೆಯಲ್ಲಿ ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ, ಜೆ.ಜೆ.ಎಂ ವಿಶ್ವನಾಥ ಶೆಟ್ಟಿ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಭಾರತ್ ನೆಟ್‌ ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

    27/11/2026

    ಕುಂಜಿಬೆಟ್ಟು – ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ‘ವಿಕಸಿತ ಭಾರತ ಯುವ ಸಂವಾದ’ ಆಚರಣೆ

    27/11/2026

    ಗುಣಮಟ್ಟದೊಂದಿಗೆ ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ರಿಜ್ವಾನ್ ಅರ್ಷದ್

    25/11/2026
    Leave A Reply Cancel Reply

    nineteen − nine =

    Call us

    Click Here

    Call us

    Call us

    Call us
    Highest Viewed Recently
    • ಭಾರತ್ ನೆಟ್‌ ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
    • ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಆರ್ಥಿಕ ನೆರವು ಕಲ್ಪಿಸಿ: ಜಿ.ಪಂ ಸಿಇಓ ಪ್ರತೀಕ್ ಬಾಯಲ್
    • ಕುಂಜಿಬೆಟ್ಟು – ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ‘ವಿಕಸಿತ ಭಾರತ ಯುವ ಸಂವಾದ’ ಆಚರಣೆ
    • ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ
    • ಕುಂದಾಪುರ ಸ.ಪ.ಪೂ ಕಾಲೇಜು: ಸಾಧಕ ಕನ್ನಡ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.