Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತ್ ನೆಟ್‌ ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
    ಉಡುಪಿ ಜಿಲ್ಲೆ

    ಭಾರತ್ ನೆಟ್‌ ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಗ್ರಾಮೀಣ ಪ್ರದೇಶದಲ್ಲಿ ವೇಗದ ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸುವ  ಭಾರತ್ ನೆಟ್‌ ಹಂತ-3 ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರೊಂದಿಗೆ ಜನರಿಗೆ ಗುಣಮಟ್ಟದೊಂದಿಗೆ ವೇಗದ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲು ಮುತುವರ್ಜಿಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

    Call us

    Click Here

    ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಭಾರತ್ ನೆಟ್ ಹಂತ-3 ರ ಅನುಷ್ಠಾನ ಕುರಿತ ಪುನರ್ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಕಛೇರಿಗಳು, ಸರಕಾರಿ ಶಾಲೆಗಳು, ಅಂಗನವಾಡಿಗಳು ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳು ವಿಶ್ವಾಸಾರ್ಹ ಡಿಜಿಟಲ್ ಸಂಪರ್ಕ ಪಡೆಯುವುದು ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯ ಅನುಷ್ಠಾನದಿಂದ ಸರಕಾರದ ಸೇವೆಗಳು ಗ್ರಾಮ ಮಟ್ಟದಲ್ಲಿ ಡಿಜಿಟಲ್ ರೂಪದಲ್ಲಿ ಲಭ್ಯವಾಗಲಿದ್ದು, ಅಧಿಕಾರಿಗಳು ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

    ಭಾರತ್ ನೆಟ್ ಮೊದಲ ಮತ್ತು ಎರಡನೇ ಹಂತದಲ್ಲಿ ಸಂಪರ್ಕ ಕಲ್ಪಿಸಲಾಗಿತ್ತು. ಆದರೆ ಎಲ್ಲಾ ಗ್ರಾಮಗಳಿಗೆ ನಿರಂತರ, ವಿಶ್ವಾಸಾರ್ಹ ಹಾಗೂ ಅಡಚಣೆ ರಹಿತ ಸೇವೆ ನೀಡುವುದು ಅವಶ್ಯವಿರುವುದನ್ನು  ಮನಗಂಡ ಸರ್ಕಾರ ಭಾರತ್‌ನೆಟ್‌ನ ಮೂರನೇ ಹಂತವಾದ ಅಮೆಂಡೆಡ್ ಭಾರತ್‌ನೆಟ್ ಪ್ರೋಗ್ರಾಂಅನ್ನು ಜಾರಿಗೆ ತಂದಿದೆ. ಈ ಮೂಲಕ ಗ್ರಾಮ ಪಂಚಾಯತ್‌ಗಳ ಜತೆಗೆ ಹಳ್ಳಿಗಳಿಗೂ ಆಪ್ಟಿಕಲ್ ಫೈಬರ್ ಸಂಪರ್ಕ ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದರು. 

    ಭಾರತ್‌ನೆಟ್‌ನ ಮೂರನೇ ಹಂತವಾದ ಅಮೆಂಡೆಡ್ ಭಾರತ್‌ನೆಟ್ ಪ್ರೋಗ್ರಾಂ ಅಡಿಯಲ್ಲಿ ರಾಜ್ಯದಲ್ಲಿ ಪಾಲಿಕ್ಯಾಬ್ ಇಂಡಿಯಾ ಲಿಮಿಟೆಡ್ ಅನುಷ್ಠಾನ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಯೋಜನೆಯಡಿ ಪ್ರಸ್ತುತ ಬ್ಲಾಕ್ ಕೇಂದ್ರಗಳಿಂದ ಗ್ರಾಮ ಪಂಚಾಯತ್‌ಗಳಿಗೆ ಕಲ್ಪಿಸಲಾಗಿರುವ ಲೀನಿಯರ್ ಸಂಪರ್ಕ ವ್ಯವಸ್ಥೆಯ ಬದಲಿಗೆ ಐಪಿ-ಎಂಪಿಎಲ್‌ಎಸ್ ಆಧಾರಿತ ರಿಂಗ್ ಆಪ್ಟಿಕಲ್ ಫೈಬರ್ ನೆಟ್‌ವರ್ಕ್ ವ್ಯವಸ್ಥೆಯ ಮೂಲಕ ನೆಟ್‌ವರ್ಕ್ನ ಸುರಕ್ಷತೆ, ವಿಶ್ವಾಸಾರ್ಹತೆ ಮತ್ತು ವೇಗವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

    ಭಾರತ್ ನೆಟ್ ನವರು ಮನೆ, ಶೈಕ್ಷಣಿಕ ಸಂಸ್ಥೆ ಹಾಗೂ ಸರಕಾರಿ ಇಲಾಖೆಗಳಿಗೆ ನೀಡಿದ ಸಂಪರ್ಕಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಸೇವೆಯಲ್ಲಿ ವ್ಯತ್ಯಾಸವಾಗಿ ಸಂಸ್ಥೆಯಿಂದ ಸ್ಪಂದನೆ ಸಿಗದೇ ಇದ್ದಾಗ ಜನರು ಖಾಸಗಿ ಸಂಸ್ಥೆಗಳ ಮೊರೆ ಹೋಗುತ್ತಾರೆ. ಹೀಗಾಗದಂತೆ ಎಚ್ಚರ ವಹಿಸಬೇಕು. ಬಿ.ಎಸ್.ಎನ್.ಎಲ್ ಇಂಟರ್ನೆಟ್ ಬಗ್ಗೆ ಪ್ರತಿ ಮನೆಗೆ ಕರಪತ್ರ ಹಂಚಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಪಿ.ಡಿ.ಓ ಗಳಿಗೆ ಸೂಚಿಸಿದ ಅವರು, ಭಾರತ್ ನೆಟ್‌ನ ಫ್ರಾಂಚೈಸಿಯಾಗಲು ಸ್ಥಳೀಯ ಯುವಕರಿಗೆ ಅವಕಾಶ ಮಾಡಿಕೊಡಬೇಕು ಎಂದರು.

    Click here

    Click here

    Call us

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಸರ್ಕಾರದ ಎಲ್ಲ ಯೋಜನೆಗಳ ಮಾಹಿತಿ ಜನರಿಗೆ ತಲುಪಬೇಕು. ದೇಶದಲ್ಲಿ 3.5 ಲಕ್ಷ ಗ್ರಾಮ ಪಂಚಾಯಿತಿ ಗಳಿಗೆ  ಆಪ್ಟಿಕಲ್ ಫೈಬರ್ ಸಂಪರ್ಕ ಕೊಡುವುದು ಸರ್ಕಾರದ ಧ್ಯೇಯವಾಗಿದೆ. ಗ್ರಾಮ ಪಂಚಾಯತಿಗಳಿAದ ಪ್ರತಿ ಮನೆಗೂ ಸಂಪರ್ಕ ಕಲ್ಪಿಸುವ ಜವಾಬ್ದಾರಿ ಬಿ.ಎಸ್.ಎನ್.ಎಲ್ ಸಂಸ್ಥೆಯ ಅಧಿಕಾರಿಗಳ ಮೇಲಿದೆ ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಬಿಎಸ್‌ಎನ್‌ಎಲ್ ಕರ್ನಾಟಕದ ಭಾರತ್‌ನೆಟ್ ವಿಭಾಗದ ಜನರಲ್ ಮ್ಯಾನೇಜರ್ ಬಿ.ಎಸ್. ನಾಗರ್, ಮಂಗಳೂರಿನ ಜನರಲ್ ಮ್ಯಾನೆಜರ್ ಹೇಮಂತ್, ಎ.ಜೆ.ಎಂ ರಾಜಶೇಖರ್, ಬಿ.ಎಸ್.ಎನ್.ಎಲ್ ನ ಅಧಿಕಾರಿಗಳು, ಫ್ರಾಂಚೈಸಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಆರ್ಥಿಕ ನೆರವು ಕಲ್ಪಿಸಿ: ಜಿ.ಪಂ ಸಿಇಓ ಪ್ರತೀಕ್ ಬಾಯಲ್

    27/11/2026

    ಕುಂಜಿಬೆಟ್ಟು – ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ‘ವಿಕಸಿತ ಭಾರತ ಯುವ ಸಂವಾದ’ ಆಚರಣೆ

    27/11/2026

    ಗುಣಮಟ್ಟದೊಂದಿಗೆ ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ರಿಜ್ವಾನ್ ಅರ್ಷದ್

    25/11/2026
    Leave A Reply Cancel Reply

    four × 1 =

    Call us

    Click Here

    Call us

    Call us

    Call us
    Highest Viewed Recently
    • ಭಾರತ್ ನೆಟ್‌ ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
    • ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಆರ್ಥಿಕ ನೆರವು ಕಲ್ಪಿಸಿ: ಜಿ.ಪಂ ಸಿಇಓ ಪ್ರತೀಕ್ ಬಾಯಲ್
    • ಕುಂಜಿಬೆಟ್ಟು – ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ‘ವಿಕಸಿತ ಭಾರತ ಯುವ ಸಂವಾದ’ ಆಚರಣೆ
    • ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ
    • ಕುಂದಾಪುರ ಸ.ಪ.ಪೂ ಕಾಲೇಜು: ಸಾಧಕ ಕನ್ನಡ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.