Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಕ್ತದಾನ ಜೀವ ಉಳಿಸುವ ಶ್ರೇಷ್ಠ ಮಾನವೀಯ ಸೇವೆ: ಡಾ. ಮಹಾಬಲ ಶೆಟ್ಟಿ
    alvas nudisiri

    ರಕ್ತದಾನ ಜೀವ ಉಳಿಸುವ ಶ್ರೇಷ್ಠ ಮಾನವೀಯ ಸೇವೆ: ಡಾ. ಮಹಾಬಲ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ರಕ್ತದಾನವು ಮತ್ತೊಂದು ಜೀವಕ್ಕೆ ಮರುಜೀವ ನೀಡುವ ಮಹತ್ವದ ಮಾನವೀಯ ಸೇವೆಯಾಗಿದ್ದು, ಆರೋಗ್ಯವಂತ ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಕೈಜೋಡಿಸಬೇಕು ಎಂದು ಆಳ್ವಾಸ್ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮಹಾಬಲ ಶೆಟ್ಟಿ  ನುಡಿದರು.

    Call us

    Click Here

    ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಆಳ್ವಾಸ್ ರೋಟರಿ ಬ್ಲಡ್ ಸೆಂಟರ್ ಸಹಯೋಗದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ  ಬುಧವಾರ ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ರಕ್ತದಾನವು ಅತ್ಯಂತ ಶ್ರೇಷ್ಠ ಮಾನವೀಯ ಸೇವೆಯಾಗಿದ್ದು, ಒಬ್ಬ ವ್ಯಕ್ತಿಯ ರಕ್ತದಾನದಿಂದ ಮತ್ತೊಂದು ಜೀವವನ್ನು ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯವಂತರು ರಕ್ತದಾನಕ್ಕೆ ಮುಂದಾಗಬೇಕು ಎಂದರು.

    ನಿರಂತರ ರಕ್ತದಾನದ ಮೂಲಕ ಜೀವ ಉಳಿಸುವ ಸೇವೆಯಲ್ಲಿ ತೊಡಗಿಸಿಕೊಂಡಿರುವ ವಿಜಯ ಎಸ್. ಪೂಜಾರಿ (88 ಬಾರಿ), ಡಾ. ರವಿಪ್ರಸಾದ ಹೆಗ್ಡೆ (44 ಬಾರಿ), ತಾರನಾಥ್ (27 ಬಾರಿ) ಹಾಗೂ ಡಯನಾ ಸೆರವೋ (11 ಬಾರಿ) ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಳ್ವಾಸ್ ಹೆಲ್ತ್ ಸೆಂಟರ್‌ನ ಉಪವೈದ್ಯಕೀಯ ಅಧೀಕ್ಷಕ ಡಾ. ಶಮಂತ್ ಶೆಟ್ಟಿ ವಹಿಸಿದ್ದರು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಅಕ್ಷತಾ ಹಾಗೂ ಆಳ್ವಾಸ್ ರೋಟರಿ ಬ್ಲಡ್ ಸೆಂಟರ್‌ನ ಉಸ್ತುವಾರಿ ಡಾ. ಅರುಣಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    Click here

    Click here

    Call us

    ಶಿಬಿರದಲ್ಲಿ ಒಟ್ಟು 97 ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಡಾ. ಪ್ರಮಿತಾ ಕಾರ್ಯಕ್ರಮ ನಿರೂಪಿಸಿ, ಡಾ. ಆಶೀಶ್ ಶರ್ಮಾ ಸ್ವಾಗತಿಸಿ, ಡಾ. ಅಶೋಕ್ ಮರಾಠೆ ವಂದಿಸಿದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    27/11/2026

    ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ವಲಯಮಟ್ಟಕ್ಕೆ ಆಯ್ಕೆ

    25/11/2026

    ಡಿ.27ರಂದು ಶ್ರೀ ಶೃಂಗೇರಿ ಶಂಕರ ಮಠ ಕುಂಭಕಾಶಿ ವತಿಯಿಂದ ತಾಲೂಕು ಮಟ್ಟದ ಸ್ಪರ್ಧೆ

    25/11/2026
    Leave A Reply Cancel Reply

    two × 4 =

    Call us

    Click Here

    Call us

    Call us

    Call us
    Highest Viewed Recently
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
    • ರಕ್ತದಾನ ಜೀವ ಉಳಿಸುವ ಶ್ರೇಷ್ಠ ಮಾನವೀಯ ಸೇವೆ: ಡಾ. ಮಹಾಬಲ ಶೆಟ್ಟಿ
    • ಭಾರತ್ ನೆಟ್‌ ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
    • ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಆರ್ಥಿಕ ನೆರವು ಕಲ್ಪಿಸಿ: ಜಿ.ಪಂ ಸಿಇಓ ಪ್ರತೀಕ್ ಬಾಯಲ್
    • ಕುಂಜಿಬೆಟ್ಟು – ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ‘ವಿಕಸಿತ ಭಾರತ ಯುವ ಸಂವಾದ’ ಆಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.