Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ವಿವೇಕ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ನಿನಾದ – 2026 ಸಂಭ್ರಮಕ್ಕೆ ಚಾಲನೆ
    ಊರ್ಮನೆ ಸಮಾಚಾರ

    ಕೋಟ ವಿವೇಕ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ನಿನಾದ – 2026 ಸಂಭ್ರಮಕ್ಕೆ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಜೀವನದಲ್ಲಿ ಮರೆಯಲಾಗದ ಕ್ಷಣ ಎಂದರೆ ಅದು ನಮ್ಮ ಬಾಲ್ಯದ ಶಿಕ್ಷಣ ಪಡೆದ ದಿನಗಳು ಅದರಲ್ಲೂ ಬಹುಮುಖ್ಯವಾಗಿ ನಾವು ಕಲಿತ ಶಾಲೆ, ಗುರುಗಳ ಪಾತ್ರ ತಂದೆ – ತಾಯಿಯಷ್ಟೆ ಶ್ರೇಷ್ಠತೆಯನ್ನು ಪಡೆಯುತ್ತದೆ ಎಂದು ಯೆನೆಪೋಯ ವೈದ್ಯಕೀಯ ಕಾಲೇಜು ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ, ದೇರಳಕಟ್ಟೆ, ಮಂಗಳೂರು ಇದರ ಕುಲಪತಿ ​ಡಾ. ಕೆ. ಎಸ್. ಗಂಗಾಧರ ಸೋಮಯಾಜಿ ಹೇಳಿದರು.

    Call us

    Click Here

    ​ಅವರು ಗುರುವಾರ ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿವೇಕ ವಿದ್ಯಾಸಂಸ್ಥೆ ಕೋಟ ಇದರ ವಾರ್ಷಿಕ ವಾರ್ಷಿಕೋತ್ಸವ ನಿನಾದ-2026ರ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ನಾನು ಇಂದು ಬಹು ಎತ್ತರಕ್ಕೆ ಬೆಳೆದಿರಬಹುದು ಅದಕ್ಕೆ ನಾನು ಕಲಿತ ಈ ವಿದ್ಯಾ ಕ್ಷೇತ್ರವೇ ಕಾರಣ ಎಂದರಲ್ಲದೆ ವಿದ್ಯಾರ್ಥಿಗಳು ತಮ್ಮ ಕಾಲೇಜು ಜೀವನವನ್ನು ಮೌಲ್ಯಯುತವಾಗಿ ಉಪಯೋಗಿಸಿಕೊಂಡು ಸಾಧನೆಯ ಮಜಲುಗಳನ್ನೆರಬೇಕು,ಮೌಲ್ಯಭರಿತ ಶಿಕ್ಷಣ ಅದು ಕೋಟದ ವಿವೇಕ ವಿದ್ಯಾಸಂಸ್ಥೆಯಲ್ಲಿ ಪಡೆಯಲು ಸಾಧ್ಯ ಎಂಬುವುದಕ್ಕೆ ನಾವುಗಳೇ ಸಾಕ್ಷಿ ಎಂದರಲ್ಲದೆ ತಂದೆ ತಾಯಿ ಗುರು ಹಿರಿಯರನ್ನು ಗೌರವಿಸುವುದರ ಜೊತೆಗೆ ನಾವು ಕಲಿತ ವಿದ್ಯಾಸಂಸ್ಥೆಗೆ ನಮ್ಮಿಂದಾದ ಅಳಿಲು ಸೇವೆಯನ್ನು ನೀಡೋಣ ಎಂದರು.

    ಈ ಸಂದರ್ಭದಲ್ಲಿ ವಿವೇಕ ವಿದ್ಯಾಸಂಸ್ಥೆಯ ಹಿಂದಿನ ವಿದ್ಯಾರ್ಥಿಗಳಾದ ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ, ದೇರಳಕಟ್ಟೆ, ಮಂಗಳೂರು  ಇದರ ಕುಲಪತಿ ​ಡಾ. ಕೆ. ಎಸ್. ಗಂಗಾಧರ ಸೋಮಯಾಜಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸುರೇಶ್ ಮರಕಾಲ,ಸಂವಾದ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಬೆಂಗಳೂರು ಇಲ್ಲಿನ ಸಹ ಪ್ರಾಧ್ಯಾಪಕಿ ಸಂಧ್ಯಾ ಕೋಟೇಶ್ವರ ಇವರುಗಳನ್ನು ಗೌರವಿಸಲಾಯಿತು.

    ವಿವೇಕ ವಿದ್ಯಾಸಂಘದ ಅಧ್ಯಕ್ಷ ಪಿ. ಭಾಸ್ಕರ್ ಹಂದೆ ಅಧ್ಯಕ್ಷತೆ ವಹಿಸಿದರು. ವಿದ್ಯಾಸಂಘದ ಕಾರ್ಯದರ್ಶಿ ಎಂ. ರಾಮದೇವ ಐತಾಳ್, ಜೊತೆ ಕಾರ್ಯದರ್ಶಿ ಮಂಜುನಾಥ್ ಉಪಾಧ್ಯಾ, ಹಿರಿಯ ಸಹಾಯಕ ಶಿಕ್ಷಕಿ ರತಿ ಬಾಯಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರೇಮಾನಂದ, ಶಾಲಾ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಿ. ರಮಾನಂದ ಭಟ್, ನಿವೃತ್ತ ಶಿಕ್ಷಕ ಶ್ರೀಪತಿ ಹೇರ್ಳೆ, ಶಿಕ್ಷಕ ವಸಂತ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ ಸ್ವಾಗತಿಸಿ, ಪರಿಚಯಿಸಿದರು. ವಿದ್ಯಾರ್ಥಿ ಮುಖಂಡ ನಿಶಾಂತ್ ಕಿಣಿ ವರದಿ ವಾಚಿಸಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಡಾ‌. ಬಾಲಕೃಷ್ಣ  ನಕ್ಷತ್ರಿ, ಜಯಶ್ರೀ ನಿರೂಪಿಸಿದರೆ, ಶಿಕ್ಷಕ ಸಂಜೀವ ಗುಂಡ್ಮಿ ವಂದಿಸಿದರು. ಬಹುಮಾನ ವಿತರಣಾ ಕಾರ್ಯಕ್ರ‌ಮ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಂಭ್ರಮ ನಡೆಯಿತು.

    Click here

    Click here

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಕ್ಷೇತ್ರ ವತ್ತಿನಕಟ್ಟೆ – ನೂತನ ಯಕ್ಷಗಾನ ಮೇಳಕ್ಕೆ ಚಾಲನೆ.‌ ಪ್ರಥಮ ದೇವರ ಸೇವೆಯಾಟ

    27/11/2026

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    27/11/2026

    ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

    27/11/2026
    Leave A Reply Cancel Reply

    15 + nine =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ಕ್ಷೇತ್ರ ವತ್ತಿನಕಟ್ಟೆ – ನೂತನ ಯಕ್ಷಗಾನ ಮೇಳಕ್ಕೆ ಚಾಲನೆ.‌ ಪ್ರಥಮ ದೇವರ ಸೇವೆಯಾಟ
    • ಕೋಟ ವಿವೇಕ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ನಿನಾದ – 2026 ಸಂಭ್ರಮಕ್ಕೆ ಚಾಲನೆ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
    • ರಕ್ತದಾನ ಜೀವ ಉಳಿಸುವ ಶ್ರೇಷ್ಠ ಮಾನವೀಯ ಸೇವೆ: ಡಾ. ಮಹಾಬಲ ಶೆಟ್ಟಿ
    • ಭಾರತ್ ನೆಟ್‌ ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.