ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕೆನರಾ ರೋಬೆಕೊ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಆಯ್ದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಕೆನರಾ ರೋಬೆಕೊ ಸಂಸ್ಥೆಯ ಹೆಡ್ ಇಂಟರ್ನಲ್ ಆಡಿಟ್ ಗುರುಚರಣ್ ಹೊಸ್ಕೋಟೆ ಅವರ ಜೊತೆಗೂಡಿ ಉದ್ಘಾಟಿಸಿದರು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕರು, ಕೆನರಾ ರೋಬೆಕೊ ಸಂಸ್ಥೆಯ ಸೈಕಲ್ ಕೊಡುಗೆ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೊಸ ಬೆಸುಗೆ ಎಂದು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಕ್ಷೇತ್ರದ ಇನ್ನಷ್ಟು ವಿದ್ಯಾರ್ಥಿಗಳಿಗೆ ಸೈಕಲ್ ನೀಡುವ ನಿಟ್ಟಿನಲ್ಲಿ ಸಂಸ್ಥೆಯಯೊಂದಿಗೆ ಸಮೃದ್ಧ ಬೈಂದೂರು ತಂಡ ಸದಾ ಜೊತೆಯಾಗಿರುತ್ತೇವೆ ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗುರುಚರಣ್ ಹೊಸ್ಕೋಟೆ ಅವರು ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಈ ಸೈಕಲ್‌ಗಳು ತಲುಪುತ್ತಿರುವುದು ಸಂತಸ ತಂದಿದೆ. ಶಾಸಕರ ಮಾರ್ಗದರ್ಶನದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಯೋಜಿಸಿದ ಯೋಜನೆ 300 ಟ್ರೀಸ್ ಇನ್ನಷ್ಟು ಯಶಸ್ವಿಯಾಗಲೆಂದು ಆಶಿಸಿದರು.
ಕಾರ್ಯಕ್ರಮದ ನಂತರ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬವಳಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳೂರು 11, ಕಂಬದಕೋಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ನಾಯ್ಕನ್ಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ 220 ಕ್ಕೂ ಹೆಚ್ಚು ಸೈಕಲ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕೆನರಾ ರೋಬೊಕೊ ಸಂಸ್ಥೆಯ ಪದಾಧಿಕಾರಿಯಾದ ಸಂದೀಪ್ ಪೂಜಾರಿ, ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಗೋವಿಂದ ಬಾಬು ಪೂಜಾರಿ, ಬಿಜೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಜೇಂದ್ರ ಬಿಜೂರು, ವೀರೇಂದ್ರ ಶೆಟ್ಟಿ, ಶೇಖರ್ ದೇವಾಡಿಗ, ಉಪ್ಪುಂದ ಸಮೂಹ ಸಂಪನ್ಮೂಲ ಕೇಂದ್ರ CRP ಮಂಜುನಾಥ ಎಸ್., ಬಿಜೂರು ನಿವೃತ್ತ ಮುಖ್ಯ ಶಿಕ್ಷಕರಾದ ರಮೇಶ್ ವಿ. ದೇವಾಡಿಗ, ಬಿಜೂರು ಎಸ್‌ಡಿಎಂಸಿ ಅಧ್ಯಕ್ಷ ಹಾಗೂ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಪ್ರಭಾರ ಮುಖ್ಯ ಶಿಕ್ಷಕರು ಸುಬ್ರಹ್ಮಣ್ಯ ಸ್ವಾಗತಿಸಿ, ರವಿ ಶೆಟ್ಟಿ ದೈಹಿಕ ಶಿಕ್ಷಕರು ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕಿ ಸುಮತಿ ಧನ್ಯವಾದ ಸಮರ್ಪಿಸಿದರು.














