ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಸಾಸ್ತಾನ ಟೋಲ್ ಸಮೀಪ ಗುಂಡ್ಮಿ ಅಂಬಾಗಿಲುನ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಅಪಘಾತದಲ್ಲಿ ಕಾರೊಂದು ಬೆಂಕಿ ಹೊತ್ತುಕೊಂಡ ಘಟನೆ ಶನಿವಾರ ಸಂಭವಿಸಿದೆ.
ಗೋಕರ್ಣದಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಕಾರು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕವನ್ನು ದಾಟಿ ಪಕ್ಕದ ಚರಂಡಿಗೆ ಬಿದ್ದಿದೆ. ಈ ವೇಳೆ ಕಾರಿನಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದೆ. ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
ಅಪಘಾತದಲ್ಲಿ ರಿಕ್ಷಾ ಚಾಲಕ ಹಾಗೂ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.














