ಎಂಡಿಆರ್‌ಟಿ ಸದಸ್ಯರಾಗಿ ಎಲ್‌ಐಸಿ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಆಯ್ಕೆ

Click Here

Call us

Call us

Call us

ಕುಂದಾಪುರ: ಭಾರತೀಯ ಜೀವ ವಿಮಾ ನಿಗಮ ಕುಂದಾಪುರ ಶಾಖೆಯ ವಿಮಾ ಸಲಹೆಗಾರರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು 2015ರಲ್ಲಿ ಉತ್ತಮ ಜೀವ ವಿಮೆ ವ್ಯವಹಾರವನ್ನು ನಡೆಸಿ ಎಂಡಿಅರ್‌ಟಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Call us

Click Here

ಕೋಣಿಯ ಮಾತಾ ಮಾಂಟೆಸ್ಸೋರಿ ಮಕ್ಕಳ ಶಾಲೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಕೆನಡಾದಲ್ಲಿ ನಡೆಯಲಿರುವ ಮಿಲಿಯನ್ ಡಾಲರ್ ರೌಂಡ್ ಟೇಬಲ್ ಜಾಗತಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಪ್ರೀಮಿಯಂ ಆಧಾರದಲ್ಲಿ ಇವರು ಅರ್ಹತೆಯನ್ನು ಪಡೆದಿದ್ದಾರೆ. ಕುಂದಾಪುರದ ಹಿರಿಯ ಜೀವವಿಮಾ ಅಭಿವೃದ್ಧಿ ಅಧಿಕಾರಿ ಕೆ. ಕರುಣಾಕರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ. ಅಸಿಸ್ಟೆಂಟ್ ಮೆನೇಜರ್ ಗುರುರಾಜ್ ಎಂ. ಎ, ಶಾಖೆಯ ಸರ್ವ ಸಿಬ್ಬಂದಿ ವರ್ಗದವರು ಸಹಕರಿಸಿದ್ದಾರೆ ಎಂದು ಕುಂದಾಪುರ ಶಾಖೆ ಹಿರಿಯ ಶಾಖಾಧಿಕಾರಿ ಪ್ರೇಮನಾಥ ರಾವ್ ತಿಳಿಸಿದ್ದಾರೆ.

Leave a Reply