ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಿಂದೆ ಪ್ರತಿ ಮನೆಯಲ್ಲಿಯೂ ಆಯುರ್ವೇದ ಪದ್ಧತಿ ಬಳಕೆಯಲ್ಲಿತ್ತು. ಸಣ್ಣ ಪುಟ್ಟ ಕಾಯಿಲೆಯಿಂದ ಹಿಡಿದು ಎಲ್ಲದಕ್ಕೂ ಗಿಡಮೂಲಿಕೆಗಳಿಂದ ಔಷಧಿ ತಯಾರಿ ನೀಡುವ ಕ್ರಮವಿತ್ತು. ಆಧುನಿಕರಾದಂತೆ ವೈದ್ಯಕೀಯ ಕ್ಷೇತ್ರದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿದ್ದರೂ ಆಯುರ್ವೇದ ಹಾಗೂ ಯುನಾನಿ ಪದ್ದತಿ ಇಂದಿಗೂ ತನ್ನ ಮಹತ್ವನ್ನು ಉಳಿಸಿಕೊಂಡಿದೆ ಎಂದು ಕುಂದಾಪುರ ಡಿಎಸ್ಪಿ ಮಂಜುನಾಥ ಶೆಟ್ಟಿ ಹೇಳಿದರು.
ಬೆಂಗಳೂರು ಆಯುರ್ವೇದ ಹಾಗೂ ಯುನಾನಿ ವೈದ್ಯ ಮಂಡಳಿ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಧನ್ವಂತರಿ ಆಯುರ್ ಜ್ಯೋತಿ ರಥಯಾತ್ರೆಯನ್ನು ಕುಂದಾಪುರ ತಾಲೂಕು ವೈದ್ಯ ಮಂಡಳಿಯು ಕುಂದಾಪುರ ತಾಲೂಕು ಪಂಚಾಯತ್ ಆವರಣಕ್ಕೆ ಬರಮಾಡಿಕೊಂಡ ಬಳಿಕ ನಡೆದ ಕಾರ್ಯಕ್ರಮದಲ್ಲಿ ಆಯುರ್ ಜ್ಯೋತಿ ಬೆಳಗಿ ಮಾತನಾಡಿದರು.
ತಾ.ಪಂ ಅಧ್ಯಕ್ಷ ಭಾಸ್ಕರ್ ಬಿಲ್ಲವ, ಉಡುಪಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಅಲಕಾನಂದ ರಾವ್, ಲಯನ್ಸ್ ಕ್ಲಬ್ ಕುಂದಾಪುರ ಅಧ್ಯಕ್ಷ ಅಶೋಕ್ ಬೆಟ್ಟಿನ್, ಪತ್ರಕರ್ತ ಕೆ. ಜಿ. ವೈದ್ಯ ಉಪಸ್ಥಿತರಿದ್ದರು. ಆಯುರ್ವೇದ ಹಾಗೂ ಯುನಾನಿ ವೈದ್ಯ ಮಂಡಳಿ ಸದಸ್ಯ ಡಾ. ಎಂ. ವಿ. ಹೊಳ್ಳ ಪ್ತಾಸ್ತಾವಿಕ ಮಾತುಗಳನ್ನಾಡಿದರು. ಕುಂದಾಪುರ ಘಟಕ ಅಧ್ಯಕ್ಷ ಡಾ. ರಾಜೇಶ್ ಬಾಯರಿ ಚಿತ್ತೂರು ಸ್ವಾಗತಿಸಿದರು. ಡಾ. ಸೋನಿ ಡಿಕೋಸ್ಟಾ ನಿರೂಪಿಸಿದರು. ಕಾರ್ಯದರ್ಶಿ ಡಾ. ರಾಜೇಶ್ ಧನ್ಯವಾದಗೈದರು.