ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಪ್ರಾಯೋಜಕತ್ವದಲ್ಲಿ ಮಹಮ್ಮದ್ ಇಕ್ಬಾಲ್ ವಂಡ್ಸೆ ಇವರು ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿಗೆ ಕೊಡುಗೆಯಾಗಿ ನೀಡಿದ ಇ-ಲರ್ನಿಂಗ್ ಕಿಟ್ ಉದ್ಘಾಟನೆ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ರೋಟರಿ 3180 ಇದರ ರೋಟರಿ ಜಿಲ್ಲಾ ಗವರ್ನರ್ ಭರತೇಶ್ ಅಧಿರಾಜ್ ಉದ್ಘಾಟಿಸಿದರು. ರೋಟರಿ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್. ಶೇರೆಗಾರ್, ಜೋನಲ್ ಲೆಫ್ಟಿನೆಂಟ್ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ರೋಟರಿ ಜಿಲ್ಲಾ ಪ್ರಥಮ ಮಹಿಳೆ ಜಯಶ್ರೀ ಭರತೇಶ್ ಅಧಿರಾಜ್, ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಸಂತೋಷ ಕೋಣಿ, ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ ಹರ್ಜಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರ ರಾಯಪ್ಪನಡಿ, ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಸಿಕ ಮೊಕ್ತೇಸರ ಸೀತಾರಾಮ ಶೆಟ್ಟಿ, ಗ್ರಾ.ಪಂ.ಸದಸ್ಯರಾದ ಉದಯ ಕೆ.ನಾಯ್ಕ, ಸಿಂಗಾರಿ ಪೂಜಾರಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಮೋಹಿನಿ ಬಾ, ದಾನಿ ರಫೀಕ್ ಸಾಹೇಬ್ ವಂಡ್ಸೆ ಉಪಸ್ಥಿತರಿದ್ದರು.
ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜು ಕಾರ್ಯಕ್ರಮ ನಿರ್ವಹಿಸಿ, ಗ್ರಾ.ಪಂ.ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಮೋಹಿನಿ ಬಾ ಸ್ವಾಗತಿಸಿ, ಶಿಕ್ಷಕಿ ಆಶಾ ವಂದಿಸಿದರು.









