ಕುಂದಾಪುರ: ರಾಸಾಯಿನಿಕ ಮಿಶ್ರಿತ ಆಹಾರ ಪದಾರ್ಥಗಳ ಬಳಕೆಯಿಂದ ಮಾರಕ ರೋಗಗಳಿಗೆ ತುತ್ತಾಗುವ ಅಪಾಯವಿದೆ. ಇಂದು ಮಾರುಕಟ್ಟೆಯಲ್ಲಿ ಸಿಗುವ ತಂಪು ಪಾನೀಯಗಳಿಂದ ಹಿಡಿದು ಬಣ್ಣ ಬಣ್ಣದ ಚಾಕಲೇಟ್‌ನಲ್ಲಿಯೂ ರುಚಿಗಾಗಿ ರಾಸಾಯನಿಕವನ್ನು ಬಳಸುತ್ತಾರೆ ಅಂತಹ ಪದಾರ್ಥಗಳ ನಿರಂತರ ಸೇವನೆ ನಮ್ಮ ಆರೋಗ್ಯವನ್ನು ಹದಗೆಡಿಸುತ್ತದೆ ಆದುದರಿಂದ ಶುದ್ಧ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ರೂಢಿಸಿಕೊಳ್ಳಿ ಎಂದು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಹೇಳಿದರು.
ಅವರು ರೋಟರಿ ಕ್ಲಬ್ ಕುಂದಾಪುರ ಆಶ್ರಯದಲ್ಲಿ ಇಡೂರು ಕುಂಜ್ಞಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿಶ್ವ ಕ್ಯಾನ್ಸ್‌ರ್ ದಿನದ ಅಂಗವಾಗಿ ಆರೋಗ್ಯ ಮಾಹಿತಿಯನ್ನು ನೀಡುತ್ತಾ ಮಾತನಾಡಿದರು.
ರೋಟರಿ ಕ್ಲಬ್ ಕುಂದಾಪುರದ ನಿಯೋಜಿತ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಉದ್ಯಮಿ ರವೀಂದ್ರನಾಥ ಶೆಟ್ಟಿ, ಅದಿತಿ ಮೆಡಿಕಲ್‌ನ ಮಾಲಕ ಚಂದ್ರಶೇಖರ ಶೆಟ್ಟಿ, ಶಾಲಾ ಮುಖ್ಯೋಪಧ್ಯಾಯಿನಿ ಗೀತಾ ಬಿ., ರೋಟರಿ ಕಾರ್ಯದರ್ಶಿ ಸಂತೋಷ ಕೋಣಿ ಉಪಸ್ಥಿತರಿದ್ದರು. ಶಿಕ್ಷಕಿ ಆಶಾಕಿರಣ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.