ಮಕ್ಕಳಿಗೆ ಬಾಲ್ಯದಲ್ಲಿ ಸಂಸ್ಕೃತಿ, ಸಂಸ್ಕಾರದ ಶಿಕ್ಷಣಕ್ಕೆ ಒತ್ತು ನೀಡಿ : ಕೃಷ್ಣರಾಯ ಶ್ಯಾನುಭಾಗ್ ಕರೆ

Click Here

Call us

Call us

Call us

ಗಂಗೊಳ್ಳಿ: ಇತ್ತೀಚಿನ ದಿನಗಳಲ್ಲಿ ಸಂಸ್ಕೃತಿ ಸಂಸ್ಕಾರದ ಕೊರತೆಯಿಂದ ಯುವಜನರು ದಾರಿ ತಪ್ಪುತ್ತಿದ್ದಾರೆ. ಇಂದು ಮಕ್ಕಳಿಗೆ ಹೆಚ್ಚೆಚ್ಚು ಕಲಿಯಲು ಪ್ರೋತ್ಸಾಹ ದೊರೆಯುತ್ತಿದ್ದರೂ ಅವರಲ್ಲಿ ಸರಿಯಾದ ಮಾರ್ಗದರ್ಶನದ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಮಕ್ಕಳಿಗೆ ಬಾಲ್ಯದಲ್ಲಿ ಸಂಸ್ಕೃತಿ ಹಾಗೂ ಸಂಸ್ಕಾರದ ಶಿಕ್ಷಣ ನೀಡಬೇಕಾದ ಅವಶ್ಯಕತೆ ಇದೆ ಎಂದು ತೆಕ್ಕಟ್ಟೆ ಸೇವಾ ಸಂಗಮದ ವಿಶ್ವಸ್ಥ ಕೃಷ್ಣರಾಯ ಶ್ಯಾನುಭಾಗ್ ಅಭಿಪ್ರಾಯಪಟ್ಟರು.

Call us

Click Here

ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಜರಗಿದ ಪಾಲಕರ ಮಿಲನ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿ ಮಾತನಾಡಿದರು.

ನಾವು ನಮ್ಮ ಜೀವನದ ಅವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಮಕ್ಕಳನ್ನು ಮುದ್ದು ಮಾಡುವುದು, ಅವರ ಅವಶ್ಯಕತೆಗಳನ್ನು ಪೂರೈಸುವುದು ಸಹಜ. ಆದರೆ ಜೊತೆಗೆ ಅವರ ಸರ್ವತೋಮುಖ ಬೆಳವಣಿಗೆ ಬಗ್ಗೆ ಹೆಚ್ಚಿನ ಗಮನಹರಿಸಬೇಕಾದುದು ಅತ್ಯವಶ್ಯಕ. ಅವರು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆದು ಗುರುತಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ಹೆತ್ತವರ ಹಾಗೂ ಪೋಷಕರು ತಮ್ಮ ಮಕ್ಕಳ ಕಡೆ ಹೆಚ್ಚಿನ ಸಮಯವನ್ನು ಕೇಂದ್ರಿಕರಿಸಬೇಕು ಎಂದರು.

ಶಿಶು ಮಂದಿರದ ಸದಸ್ಯರಾದ ಬಿ.ಲಕ್ಷ್ಮೀಕಾಂತ ಮಡಿವಾಳ, ಬಿ.ರಾಘವೇಂದ್ರ ಪೈ, ವಸಂತಿ ಎನ್.ಖಾರ್ವಿ, ಮಾತಾಜಿ ಸುಮನಾ, ಮಾತಾಜಿ ಶೈಲಾ ಮೊದಲಾದವರು ಉಪಸ್ಥಿತರಿದ್ದರು. ಶಿಶು ಮಂದಿರದ ಅಧ್ಯಕ್ಷ ಶ್ರೀನಿವಾಸ ಎಂ. ಸ್ವಾಗತಿಸಿದರು. ಸಂಚಾಲಕ ಡಾ.ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಸವಿತಾ ಯು.ದೇವಾಡಿಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply