ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕುಂದಾಪುರ ತಾಲೂಕು ಪಂಚಾಯತ್‌ನ ಬೈಂದೂರು ತಾಪಂ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ವನಜ ಭಾಸ್ಕರ್ ಸ್ಪರ್ಧಿಸುತ್ತಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ
ತಗ್ಗರ್ಸೆಯಲ್ಲಿ ನೆಲೆಸಿರುವ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದುಕೊಂಡು ವಿವಿಧ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಇವರಿಗೆ ಸಾಮಾಜಿಕ ಬದುಕಿನ ಅನುಭವಿದೆ. ನವೋದಯ ಸ್ವ ಸಹಕಾಯ ಗುಂಪಿನ ಅಧ್ಯಕ್ಷರಾಗಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅನುಭವ ಹೊಂದಿದ್ದಾರೆ.