ಕುಂದಾಪುರ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕಂಡ್ಲೂರು, ಪ್ರಸಾದ್ ನೇತ್ರಾಲಯ ಉಡುಪಿ, ಗ್ರಾಮ ಪಂಚಾಯತ್ ಕಾವ್ರಾಡಿ, ರೋಟರಿ ಕ್ಲಬ್ ಅಂಪಾರು ಇವರ ಜಂಟಿ ಆಶ್ರಯದಲ್ಲಿ ಚರ್ಮರೋಗ ಮತ್ತು ಕಣ್ಣಿನ ಪೊರೆ ಹಾಗೂ ಕಣ್ಣಿನ ತಪಾಸಣೆ ಶಿಬಿರ ಕಂಡ್ಲೂರು ಪ್ರಾಥಮಿಕ ಆರೋಗ್ಯಕೇಂದ್ರದಲ್ಲಿ ಇತ್ತೀಚಿಗೆ ನಡೆಯಿತು.
ಅಂಪಾರು ರೋಟರಿ ಅಧ್ಯಕ್ಷ ಸಂತೋಷ್‌ಕುಮಾರ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ರೋಟರಿ ವಲಯ ಸೇನಾನಿ ಶ್ಯಾಮರಾಜ್ ಭಟ್ ಶಿಬಿರ ಉದ್ಘಾಟಿಸಿದರು. ಚರ್ಮರೋಗ ತಜ್ಞ ಡಾ. ಉಮೇಶ್ ನಾಯಕ್, ರೋಟರಿ ಕಾರ್ಯದರ್ಶಿ ಕಾಳಿಂಗ ಶೆಟ್ಟಿ ಉಪಸ್ಥಿತರಿದ್ದರು. ಕಂಡ್ಲೂರು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಲತಾ ನಾಯಕ್ ಸ್ವಾಗತಿಸಿ, ವಂದಿಸಿದರು. ಪರಿಸರದ ಸುಮಾರು ೩೫೦ಕ್ಕೂ ಹೆಚ್ಚು ಫಲಾನುಭವಿಗಳು ಸಿಬಿರದ ಸದುಪಯೋಗ ಪಡೆದರು.