ಉಪ್ಪಿನಕುದ್ರುವಿನಲ್ಲಿ ವಿಶ್ವವಿದ್ಯಾಲಯವನ್ನು ಮೀರಿದ ಸಾಧನೆ : ರಂಜಿತ್ ಕುಮಾರ್ ಶೆಟ್ಟಿ

Call us

Call us

Call us

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರದ ಸಹಭಾಗಿತ್ವದಲ್ಲಿ ನಡೆದ ತಿಂಗಳ ಕಾರ್ಯಕ್ರಮದಲ್ಲಿ ನಮ್ಮ ಕಲಾಕೇಂದ್ರದ ಮೂಲಕ ಅನುಪಮ ಕಲಾ ಸೇವೆಯನ್ನು ಸಲ್ಲಿಸುತ್ತಿರುವ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ, ಶ್ರೀಮತಿ ಪಲ್ಲವಿ ರಂಜಿತ್ ಶೆಟ್ಟಿಯವರನ್ನು ಗೌರವಿಸಲಾಯಿತು.

Call us

Click Here

ಸನ್ಮಾನ ಸ್ವೀಕರಿಸಿ ಮಾತನಾಡಿದ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ, ಗ್ರಾಮೀಣ ಭಾಗದಲ್ಲಿ ಯಕ್ಷಗಾನ ಗೊಂಬೆಯಾಟ ಅಕಾಡಮಿಯನ್ನು ತೆರೆದು ನಿರಂತರ ಪರಂಪರಾಗತ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪರಿಶ್ರಮಿಸುತ್ತಿರುವುದು ಪ್ರಶಂಸನೀಯ. ಯಾವುದೇ ವಿಶ್ವವಿದ್ಯಾನಿಲಯಗಳು ಮಾಡದ ಸಾಧನೆಯನ್ನು ಭಾಸ್ಕರ ಕೊಗ್ಗ ಕಾಮತ್‌ರು ಉಪ್ಪಿನಕುದ್ರುವಿನಲ್ಲಿ ಗೊಂಬೆಯಾಟ ಅಕಾಡೆಮಿಯನ್ನು ಸ್ಥಾಪಿಸುವ ಮೂಲಕ ಮಾಡಿ ತೋರಿಸಿದ್ದಾರೆ. ಅವರ ಕಲೆಯ ಕುರಿತಾದ ಕಾಳಜಿ ಅಪಾರವಾದುದು ಎಂದು ಕೋಟೇಶ್ವರದ ನಮ್ಮ ಕಲಾಕೇಂದ್ರದ ಸಂಚಾಲಕ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ ಹೇಳಿದರು.

ಫೆಬ್ರವರಿ ತಿಂಗಳ ಗೊಂಬೆಮನೆ ಅತಿಥಿಯಾಗಿ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಭಾಗವಹಿಸಿ ಶುಭಹಾರೈಸಿದರು. ಹಿರಿಯ ಗೊಂಬೆಯಾಟ ಕಲಾವಿದ ವಾಮನ ಪೈ, ಮಂಜುನಾಥ ಮೈಪಾಡಿ, ರೋಟರಿ ಕಾರ್ಯದರ್ಶಿ ಸಂತೋಷ ಕೋಣಿ ಉಪಸ್ಥಿತರಿದ್ದರು. ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ ಕೊಗ್ಗ ಕಾಮತ್ ಸ್ವಾಗತಿಸಿದರು. ಶಿಕ್ಷಕ ನಾಗೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕೋಟೇಶ್ವರದ ನಮ್ಮ ಕಲಾಕೇಂದ್ರದಿಂದ ಮಾಗದ ವಧೆ ಯಕ್ಷಗಾನ ನಡೆಯಿತು.

Leave a Reply