ಕುಂದಾಪುರ : ಕುಂದಾಪುರ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರ ಸಂಘದಿಂದ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸುದೀರ್ಘ 34 ವರುಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸದಾನಂದ ನಾಯಕ್ ಅವರನ್ನು ಗೌರವಿಸಿ ಬೀಳ್ಕೊಡಲಾಯಿತು.
ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ನಾಗರತ್ನ ಹವಾಲ್ದಾರ್, ಖಜಾಂಜಿ ಶೋಭಾ ಕುಂಬ್ರಿ, ಸದಸ್ಯರಾದ ದಾಕ್ಷಾಯಿಣಿ, ಇಂದಿರಾ, ಭಾಗೀರಥಿ, ಅನುಸೂಯ, ಸಾವಿತ್ರಿ, ಲೋಲಾಕ್ಷಿ,ಪದ್ಮಾವತಿ, ಶೋಭಾ ಕೊರವಡಿ, ಭವಾನಿ ಮತ್ತಿತರರು ಉಪಸ್ಥಿತರಿದ್ದರು.
ವರದಿ : ನರೇಂದ್ರ ಎಸ್ ಗಂಗೊಳ್ಳಿ.