ಗುಜ್ಜಾಡಿ ಸರಕಾರಿ ಶಾಲೆ ಕಟ್ಟಡ ನವೀಕರಣಕ್ಕೆ ಶಿಲಾನ್ಯಾಸ

Call us

Call us

Call us

ಕುಂದಾಪುರ: ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡವನ್ನು ನವೀಕರಣಗೊಳಿಸಿ ಸುಸಜ್ಜಿತವಾಗಿ ನಿರ್ಮಿಸಲು ದುಬೈನ ಉದ್ಯಮಿ ಕೊಂಚಾಡಿ ಗಣಪತಿ ಶೆಣೈ ಅವರು ನೀಡಿದ ದೇಣಿಗೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಈ ಕಟ್ಟಡವನ್ನು ಶಾಲೆಯ ಮಕ್ಕಳ ಉಪಯೋಗಕ್ಕೆ ಬಿಟ್ಟುಕೊಡುವಂತಾಗಲು ಹಾಗೂ ಈ ನವೀಕರಣ ಕಾರ್ಯ ಯಶಸ್ವಿಯಾಗಿ ನಡೆಯಲು ಎಲ್ಲರೂ ಸಹಕಾರ ನೀಡಬೇಕು ಎಂದು ಗಂಗೊಳ್ಳಿಯ ಉದ್ಯಮಿ ಎಚ್.ಗಣೇಶ ಕಾಮತ್ ಹೇಳಿದರು.

Call us

Click Here

ಅವರು ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನವೀಕರಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮನಾಥ ಚಿತ್ತಾಲ್, ಜಿಪಂ ಸದಸ್ಯೆ ಶೋಭಾ ಪುತ್ರನ್, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ ಮೇಸ್ತ, ಪತ್ರಕರ್ತ ಬಿ.ರಾಘವೇಂದ್ರ ಪೈ, ಗುಜ್ಜಾಡಿಯ ಉದ್ಯಮಿ ಉಮೇಶ ಮೇಸ್ತ, ಶಾಲೆಯ ಮುಖ್ಯೋಪಾಧ್ಯಾಯ ಹನುಮಂತ ಬಿಲ್ಲವ ಶುಭ ಹಾರೈಸಿದರು. ವೇದಮೂರ್ತಿ ಜಿ.ಅನಂತಕೃಷ್ಣ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಎಸ್‌ಡಿಎಂಸಿ ಉಪಾಧ್ಯಕ್ಷೆ ಇಂದಿರಾ, ಶೇಖರ ಪೂಜಾರಿ, ಶಾಲೆಯ ಎಸ್‌ಡಿಎಂಸಿ ಸದಸ್ಯರು, ಶಾಲೆಯ ಸಹಶಿಕ್ಷಕರು, ಪೋಷಕರು ಮೊದಲಾದವರು ಉಪಸ್ಥಿತರಿದ್ದರು.

Leave a Reply