ಗಂಗೊಳ್ಳಿ : ಕರಾವಳಿ ವಾರಿಯರ್ಸ್ಬೇಲಿಕೇರಿ ಗಂಗೊಳ್ಳಿ ಇವರ ಆಶ್ರಯದಲ್ಲಿ ಇತ್ತೀಚಿಗೆ ಗಂಗೊಳ್ಳಿಯ ಕೆಎಫ್‌ಡಿಸಿ ವಠಾರದಲ್ಲಿ ನಡೆದ ೩೦ ಗಜಗಳ ತಾಲೂಕು ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ನ್ಯೂ ವೀರಕೇಸರಿ ತಂಡ ಪ್ರಥಮ ಸ್ಥಾನಿಯಾಗಿ ಕರಾವಳಿ ವಾರಿಯರ್ಸ್ ಟ್ರೋಫಿ ಹಾಗೂ ನಗದ ಬಹುಮಾನವನ್ನು ತನ್ನದಾಗಿಸಿಕೊಂಡಿತು.
ಗುರುಜ್ಯೋತಿ ಗಂಗೊಳ್ಳಿ ತಂಡ ದ್ವಿತೀಯ ಸ್ಥಾನಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗಂಗೊಳ್ಳಿ ಗ್ರಾಪಂ ಮಾಜಿ ಸದಸ್ಯ ದುರ್ಗರಾಜ್ ಪೂಜಾರಿ ವಹಿಸಿದ್ದರು. ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಜಿ.ಟಿ.ಮಂಜುನಾಥ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ತ್ರಾಸಿ ಜಿಪಂ ಸದಸ್ಯೆ ಶೋಭಾ ಪುತ್ರನ್, ಗಂಗೊಳ್ಳಿ ಗ್ರಾಪಂ ಸದಸ್ಯ ಮುಜಾಹಿದ್ ಅಲಿ ನಾಕುದಾ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಕಾರ್ಯದರ್ಶಿ ನಾಗರಾಜ ಖಾರ್ವಿ, ಸಂಘದ ಅಧ್ಯಕ್ಷ ರಾಘವೇಂದ್ರ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷ ಸುಮಂತ್ ಖಾರ್ವಿ ಸ್ವಾಗತಿಸಿದರು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಗಣೇಶ ಖಾರ್ವಿ ವಂದಿಸಿದರು. ತಾಲೂಕಿನ 22 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು.