ಕೊಲ್ಲೂರು ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಒತ್ತಾಯ: ಶಾಸಕ ಗೋಪಾಲ ಪೂಜಾರಿ

Call us

Call us

Call us

ಪ್ರಕರಣದ ಸಮಗ್ರ ತನಿಕೆಗೆ ಆದೇಶ,

Call us

Click Here

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಕೊಲ್ಲೂರು ಚಿನ್ನಾಭರಣ ಕಳವು ಪ್ರರಣ ಬೆಳಕಿಗೆ ಬಂದ ಬೆನ್ನಲ್ಲೇ ಕಳೆದ ಎಂಟು ವರ್ಷಗಳಿಂದ ಕ್ಷೇತ್ರದಲ್ಲಿ ಲೆಕ್ಕಪತ್ರಗಳ ಪರಿಶೋಧನೆ ನಡೆಯದಿರುವುದು ಸಂಶಯಕ್ಕೆ ಎಡೆಮಾಡಿಕೊಡುತ್ತಿದ್ದು, ಜನರ ಅಪೇಕ್ಷೆಯಂತೆ ಪ್ರಕರಣವನ್ನು ಸಿಐಡಿ ಅಥವಾ ಸಿಬಿಐ ತನಿಕೆಗೆ ಆದೇಶಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸುವುದಾಗಿ ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

ಬುಧವಾರ ಇಲ್ಲಿನ ಶಾಸಕರ ಕಛೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಕರಣದ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿಯೂ ಪ್ರಸ್ತಾಪಿಸಿದ್ದೇನೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಕೊಟ್ಯಂತರ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ದೇವಳದ ಡಿ ದರ್ಜೆ ನೌಕರನೋರ್ವನ ಕೈಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ತಿಜೋರಿಯ ಬೀಗದ ಕೈ ನೀಡಿರುವುದೇ ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂದರು.

ದೇವಳದಿಂದ ಕಳವಾದ ಹಣ ಮತ್ತು ಚಿನ್ನಾಭರಣಗಳ ಸಮಗ್ರ ತನಿಕೆಯಾಗಬೇಕು. ಈ ಬಗ್ಗೆ ಉಡುಪಿ ಎಸ್ಪಿ ಕೆ. ಅಣ್ಣಾಮಲೈ ಅವರೊಂದಿಗೂ ಚರ್ಚಿಸಿದ್ದೇನೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿರಿ ಅವರನ್ನು ಶಿಕ್ಷಿಸುವಂತೆ ನಿರ್ದೇಶನ ನೀಡಲಾಗಿದೆ. ಇದರಲ್ಲಿ ಒತ್ತಡ ತರುವ ಪ್ರಶ್ನೆಯೇ ಇಲ್ಲ ಎಂದ ಅವರು ದೇವಳದಲ್ಲಿ ಕಾರ್ಯನಿರ್ವಹಿಸುತ್ತಿರುವ ತಪ್ಪಿತಸ್ಥ ಸಿಬ್ಬಂಧಿಗಳನ್ನು ಕೆಲಸದಿಂದ ವಜಾಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಮುಂದೆಯೂ ದೇವಳದ ಭದ್ರತೆಯ ಬಗ್ಗೆ ಗಮನಹರಿಸುವಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ

ವ್ಯವಸ್ಥಾಪನಾ ಮಂಡಳಿ ನೇಮಕ: ದೇವಳದ ಆಡಳಿತ ಮಂಡಳಿಯನ್ನು ಒಂದು ತಿಂಗಳೊಳಗಾಗಿ ನೇಮಿಸಲಾಗುವುದು. ನ್ಯಾಯಾಲಯದ ನಿರ್ದೇಶನದಂತೆ ಮುಂದುವರಿಯಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಗಾಣಿಗ ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

Leave a Reply