ಖುದ್ದು ವಿಚಾರಣೆಗೆ ಹಾಜರಾಗುವಂತೆ ಪ್ರಾಂಶುಪಾಲರಿಗೆ ನೋಟಿಸ್
ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಂತ್ರಿಕ ಪದವಿ ವಿದ್ಯಾರ್ಥಿನಿಯೊಬ್ಬಳು ಸೆಮಿಸ್ಟರ್ ನಲ್ಲಿ ತನಗೆ ಕಡಿಮೆ ಅಂಕ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಸಂಬಂಧ ಮೂಡ್ಲಕಟ್ಟೆ ತಾಂತ್ರಿಕ ಕಾಲೇಜು ಪ್ರಾಂಶುಪಾಲರಿಗೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ನ್ಯಾಯಾಲಯ ನಿರ್ದೇಶಿಸಿದೆ.
ಸೆಮಿಸ್ಟರ್ ನಲ್ಲಿ ತನಗೆ ಕಡಿಮೆ ಅಂಕ ನೀಡಿರುವುದನ್ನು ಪ್ರಶ್ನಿಸಿ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿನಿ ಎಸ್. ಮುನವರ ಸುಲ್ತಾನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐದು ಬಾರಿ ನೋಟಿಸ್ ನೀಡಿದ್ದರೂ ಈ ಬಗ್ಗೆ ಕಾಲೇಜಿನಿಂದ ವಿವರಣೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅಬ್ದುಲ್ ನಜೀರ್ ಅವರಿದ್ದ ಏಕಸದಸ್ಯ ಪೀಠ, ಹೈಕೋರ್ಟ್ ಆದೇಶಗಳಿಗೆ ನಿರ್ಲಕ್ಷ್ಯ ತೋರುತ್ತಿರುವ ಕಾಲೇಜು ಆಡಳಿತ ಮಂಡಳಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಪ್ರಾಂಶುಪಾಲರಿಗೆ ಖುದ್ದು ಹಾಜರಾಗುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ವಿದ್ಯಾರ್ಥಿನಿ ಎಸ್. ಮುನವರ ಸುಲ್ತಾನ್ ಮೊದಲ ಹಾಗೂ ಎರಡನೇ ಸೆಮಿಸ್ಟರ್ ನ ಗಣಿತ ವಿಭಾಗದಲ್ಲಿ ಆಂತರಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ನೀಡಿದ್ದರೂ ಅಂಕಪಟ್ಟಿಯಲ್ಲಿ ಕಮ್ಮಿ ಅಂಕ ನಮೂದಿಸಲಾಗಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ. ಆಗ ಹೈಕೋರ್ಟ್ ಮೆಟ್ಟಿಲೇರಿ ನ್ಯಾಯ ದೊರಕಿಸಿಕೊಂಡಿದ್ದಳು. ಇದೀಗ ಮತ್ತೆ ಎಂಟನೆ ಸೆಮಿಸ್ಟರ್ ನಲ್ಲಿಯೂ ಅಂಕ ಕಡಿಮೆ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಳು.