ಗಂಗೊಳ್ಳಿ: ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮ ರಥೋತ್ಸವ ಸಂಪನ್ನ

Click Here

Call us

Call us

Call us

ಗಂಗೊಳ್ಳಿ: ಪುರಾಣ ಪ್ರಸಿದ್ಧ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮ ರಥೋತ್ಸವವು ಮಂಗಳವಾರ ವಿಜೃಂಭಣೆಯಿಂದ ಜರಗಿತು. ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

Call us

Click Here

ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ, ಜಿಪಂ ಸದಸ್ಯೆ ಶೋಭಾ ಪುತ್ರನ್, ಗಂಗೊಳ್ಳಿ ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಹೆಮ್ಮಾಡಿ ತಾಪಂ ಸದಸ್ಯ ರಾಜು ದೇವಾಡಿಗ ಮೊದಲಾದವರು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಊರ ಪರ ಊರಿನ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕುಂದಾಪುರದ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ, ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸುದರ್ಶನ ಎಂ. ಮಾರ್ಗದರ್ಶನದಲ್ಲಿ ಗಂಗೊಳ್ಳಿ ಎಸ್‌ಐ ಸುಬ್ಬಣ್ಣ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಚಿತ್ರ : ಸುರಭಿ ಗಂಗೊಳ್ಳಿ

Leave a Reply