ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ನಿವೃತ್ತ ಪೋಸ್ಟ್ ಮಾಸ್ಟರ್ ಹಾಗೂ ರಂಗ ಕಲಾವಿದ ಹೊಸಾಡಿನ ಜಯರಾಮ ನಾವಡ (೭೪) ಅಲ್ಪ ಕಾಲದ ಅಸೌಖ್ಯದಿಂದಾಗಿ ಕೊನೆಯುಸಿರೆಳೆದರು. ರೂಪರಂಗ ನಾಟಕ ಸಂಸ್ಥೆಯ ನಾಟಕಗಳಲ್ಲಿ ಅಭಿನಯಿಸಿ ಅಪಾರ ಜನಮನ್ನಣೆ ಗಳಿಸಿದ್ದ ಜಯರಾಮ ನಾವಡ ಕುಂದೇಶ್ವರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸೇರಿದಂತೆ ಸಾಮಾಜಿಕ, ಸಾಂಸ್ಕೃತಿಕ ರಂಗದಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದರು. ಇವರು ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.










