ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಪದವಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಹಲವಾರು ಲೋಪಗಳಿದ್ದು, ಉತ್ತರ ಪತ್ರಿಕೆಯನ್ನು ಮರುಮೌಲ್ಯಮಾಪನ ಮಾಡಬೇಕೆಂದು ಆಗ್ರಹಿಸಿ ಭಂಡಾರ್‌ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಮಿನಿ ಸೌಧದ ಎದುರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಎಬಿವಿಪಿ ಮುಖಂಡ ಮಾತನಾಡಿ ೧, ೩ ಮತ್ತು ೫ನೇ ಸೆಮಿಸ್ಟರ್‌ನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಹಲವಾರು ತಪ್ಪುಗಳು ಕಂಡುಬಂದಿದೆ. ಅಂಕಪಟ್ಟಿಯಲ್ಲಿ ಹೆಚ್ಚಿನ ಅಂಕ ಇದ್ದರೂ ಕೊನೆಯಲ್ಲಿ ಅನುತ್ತೀರ್ಣವೆಂದು ಹಾಕಲಾಗಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಎಂದು ಪರಿಗಣಿಸಲಾಗಿದ್ದು, ಪರೀಕ್ಷೆ ಬರೆಯದ ವಿದ್ಯಾರ್ಥಿಗಳಿಗೆ ಉತ್ತೀರ್ಣವೆಂಬ ಫಲಿತಾಂಶ ಬಂದಿದೆ. ರ‍್ಯಾಂಕ್ ಪಡೆಯುವ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಹೀಗೆ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಮಂಗಳೂರು ವಿವಿ ಆಟವಾಡುತ್ತಿರುವುದು ಸರಿಯಲ್ಲ. ಈ ಗೊಂದಲಮಯ ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಇಲ್ಲವಾದಲ್ಲಿ ನ್ಯಾಯಕ್ಕಾಗಿ ತೀವೃ ಸ್ವರೂಪದ ಹೋರಾಟಕ್ಕೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮುಂದಾಗಲಿದ್ದಾರೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ
ಭಂಡಾರ್‌ಕಾರ್ಸ್ ಕಾಲೇಜಿನಿಂದ ಹೊರಟ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ಮಿನಿ ವಿಧಾನಸೌಧ ತಲುಪಿ ಪ್ರತಿಭಟನೆ ನಡೆಸಿದರು. ಬಳಿಕ ಎಸಿ ಅಶ್ವಥಿ ಅವರಿಗೆ ಮನವಿ ಸಲ್ಲಿಸಲಾಯಿತು. ಎಬಿವಿಪಿ ಮುಖಂಡರಾದ ರಕ್ಷಿತ್ ಶೆಟ್ಟಿ, ಕಿಶನ್, ಜ್ಯೋತಿ, ನಿರಂಜನ್, ಸಂಪತ್, ವಿನಾಯಕ ಶೆಣೈ, ಸಚಿನ್ ಕಿಣಿ, ಪ್ರಜ್ವಲ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.