ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಕೊಂಕಣಿ ಖಾರ್ವಿ ಸಮಾಜ ಬಾಂಧವರ ಬಹುದೊಡ್ಡ ಹಬ್ಬ ಹೋಳಿಯನ್ನು ವಾರಗಳ ಕಾಲ ಅದ್ದೂರಿಯಾಗಿ ಆಚರಿಸಲಾಗಿದ್ದು ಕೊನೆಯ ದಿನ ಹೋಳಿ ಓಕುಳಿ ಹಾಗೂ ಬೃಹತ್ ಪುರಮೆರವಣಿಗೆಯೊಂದಿಗೆ ಸಮಾಪನಗೊಂಡಿತು.
ಜನಪದ ವಾದ್ಯ ಗುಮಟೆ, ಚೆಂಡೆ ವಾದನ, ಹೋಳಿ ನೃತ್ಯ ಮನ ಸೆಳೆದರೇ, ಶಿವನ ಸ್ತಬ್ಧಚಿತ್ರ ಹೋಳಿ ಮೆರವಣಿಗೆಯ ಕಳೆ ಹೆಚ್ಚಿಸಿತು. ಎರಡು ತಾಸಿಗೂ ಮಿಕ್ಕಿ ನಡೆದ ಮೆರವಣಿಗೆಯಲ್ಲಿ ಕೊಂಕಣಿ ಖಾರ್ವಿ ಸಮಾಜದ ಪುರುಷರು, ಮಹಿಳೆಯರು, ಮಕ್ಕಳು ಹಾಗೂ ಊರವರು ಪರಸ್ಪರ ಬಣ್ಣ ಎರಚಿಕೊಂಡು ಬಣ್ಣದ ಹಬ್ಬದ ರಂಗು ತುಂಬಿದರು. ಮೆರವಣಿಗೆಯುದ್ದಕ್ಕೂ ಮೊಳಗಿದ ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸಿದರು. ಅಂತಾರಾಷ್ಟ್ರೀಯ ಎಫ್‌ಎಸ್‌ಎಲ್ ಸೇವಾ ಸಂಸ್ಥೆಯ ವಿದೇಶಿ ಸ್ವಯಂಸೇವಕರು ಹೋಳಿ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದು ವಿಶೇಷವಾಗಿತ್ತು. ಮೆರವಣಿಗೆಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೂವಸ್ತ್ ಮಾಡಲಾಗಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ.
►ಇದನ್ನೂ ಓದಿ: ಕೊಂಕಣಿ ಖಾರ್ವಿ ಜನಾಂಗದ ವೈಶಿಷ್ಟ್ಯಪೂರ್ಣ ಆಚರಣೆ ಹೋಳಿ – http://kundapraa.com/?p=12447
►ಮತ್ತಷ್ಟು ಚಿತ್ರಗಳು – ಇಲ್ಲಿ ಕ್ಲಿಕ್ಮಾಡಿ ನೋಡಿ