ಕುಂದಾಪ್ರ ಡಾಟ್ ಕಾಂ – ಕುಂದಾಪುರ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮತ್ತು ಹಿತಾಸಕ್ತಿಗೆ ಅನುಗುಣವಾಗಿ ಯಾವುದಾದರೂ ಕ್ಷೇತ್ರದಲ್ಲಿ ತಮ್ಮನ್ನು ಕ್ರೀಯಾಶೀಲವಾಗಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲಿಯೇ ಓದಿನ ಕ್ರೀಯಾಚರಣೆಯ ಜೊತೆಗೆ ಸ್ವಉದ್ಯೋಗದ ಕುರಿತು ಮಾಹಿತಿ ಮತ್ತು ತರಬೇತಿಯನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಹಿಂಜರಿಕೆಯನ್ನು ಬಿಟ್ಟು ಉದ್ಯಮಶೀಲತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಯಶಸ್ಸು ಸಾಧ್ಯ ಎಂದು ರುಡ್‌ಸೆಟ್ ಸಂಸ್ಥೆಯ ತರಬೇತುದಾರ ಪ್ರಾಧ್ಯಾಪಕ ಕರುಣಾಕರ ಕೆ. ಹೇಳಿದರು.
ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಆಶ್ರಯದಲ್ಲಿ ‘ಉದ್ಯಮಶೀಲತಾ ಅರಿವು’ ಎಂಬ ವಿಷಯದ ಕುರಿತು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ಕು. ಶಬೀನಾ ಎಚ್ ಮತ್ತು ಸಹ ಸಂಯೋಜಕರಾದ ಶ್ರೀ ವಿಘ್ನೇಶ್ವರ್ ರಾವ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಶ್ರೀನಿಧಿ ವಂದಿಸಿದರು.