ಕೊಡಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಸಂಘ ಸಂಸ್ಥೆಗಳು ಸರಕಾರದ ಹಾಗೂ ಇನ್ನಿತರ ಸಾಮಾಜಿಕ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಜನರಿಗೆ ಬೇಕಾದ ಮಾಹಿತಿ ಮಾರ್ಗದರ್ಶನ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಬೇಕು. ವಿಶೇಷವಾಗಿ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ಜನರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ತಾಪಂ ಸದಸ್ಯ ನಾರಾಯಣ ಕೆ. ಗುಜ್ಜಾಡಿ ಹೇಳಿದರು.

Call us

Click Here

ಅವರು ಕೊಡಪಾಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗಿರಿಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಆದರ್ಶ ಆಸ್ಪತ್ರೆಯ ತಜ್ಞ ವೈದ್ಯರುಗಳಾದ ಡಾ.ಬಸವರಾಜ್, ಡಾ.ಪ್ರಸನ್ನ, ಕೊಡಪಾಡಿ ಸವ್ಯಸಾಚಿ ಯುವಕ ಮಂಡಲದ ಉಪಾಧ್ಯಕ್ಷ ವಸಂತ ಪೂಜಾರಿ, ತಾಯಿ ಮಾರಿಕಾಂಬ ಮಹಿಳಾ ಮಂಡಳಿಯ ಅಧ್ಯಕ್ಷೆ ವಿಜಯಾ ಬಿ.ಗಾಣಿಗ, ಹವ್ಯಾಸಿ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ನರಸಿಂಹ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

ಅಧ್ಯಾಪಕ ಭಾಸ್ಕರ ಗಾಣಿಗ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಾಜಪೇಯಿ ಆರೋಗ್ಯಶ್ರೀ ಯೋಜನೆಯ ಜಿಲ್ಲಾ ಸಂಯೋಜಕ ಸಚ್ಚಿದಾನಂದ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರಕಾರದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆದರ್ಶ ಆಸ್ಪತ್ರೆ ಉಡುಪಿ, ತಾಯಿ ಮಾರಿಕಾಂಬ ಮಹಿಳಾ ಮಂಡಳಿ ಕೊಡಪಾಡಿ, ಸವ್ಯಸಾಚಿ ಯುವಕ ಮಂಡಲ ಕೊಡಪಾಡಿ, ಹವ್ಯಾಸಿ ಯಕ್ಷಗಾನ ಕಲಾ ಸಂಘ ನಾಯಕವಾಡಿ ಗುಜ್ಜಾಡಿ, ಶ್ರೀ ಮಾರಿಕಾಂಬಾ ಶಾಮಿಯಾನಾ, ಶ್ರೀ ಅಕ್ಷಯ ಶಾಮಿಯಾನ ಕೊಡಪಾಡಿ ಇವರ ಆಶ್ರಯದಲ್ಲಿ ಶಿಬಿರವನ್ನು ಆಯೋಜಿಸಲಾಗಿತ್ತು.

Leave a Reply