ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಮ್ಮ ದೇಶದ ಸಾವಿರಾರು ವರ್ಷಗಳ ಹಿಂದಿನ ಸಂಸ್ಕೃತಿಗಳನ್ನು ಉಳಿಸಿ ಕೊಳ್ಳಬೇಕಾಗಿರುವುದು ನಮ್ಮ ಜವಾಬ್ದಾರಿ. ಇಂದಿನ ಕಾಲದಲ್ಲಿ ಮನೆಯಲ್ಲಿ, ಶಾಲೆಯಲ್ಲಿ, ಸಮಾಜದಲ್ಲಿ ಸಿಗದ ಸಂಸ್ಕಾರ ಸಂಸ್ಕೃತಿಯನ್ನು ಯುವಕ ಮಂಡಲಗಳ ಸ್ನೇಹಿತರು ಜವಾಬ್ದಾರಿಯಿಂದ ನೀಡಿದಲ್ಲಿ ನಮ್ಮ ಪುರಾತನ ಸಂಸ್ಕ್ರತಿಯನ್ನು ಉಳಿಸಲು ಸಾಧ್ಯ ಎಂದು ಉಡುಪಿಯ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಮಲ್ಪೆ ಹೇಳಿದರು.
ಅವರು ಇತ್ತೀಚಿಗೆ ಸ್ನೇಹ ಯುತ್ ಕ್ಲಬ್ ಹೊಸಪೇಟೆ ತ್ರಾಸಿ ಇವರ ಆಶ್ರಯದಲ್ಲಿ ಜರಗಿದ ಸ್ನೇಹೋತ್ಸವ-2016 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಪಂ ಸದಸ್ಯೆ ಶೋಭಾ ಜಿ. ಪುತ್ರನ್, ಜಿಪಂ ಮಾಜಿ ಸದಸ್ಯ ಅನಂತ ಮೊವಾಡಿ, ತ್ರಾಸಿ ಗ್ರಾಪಂ ಸದಸ್ಯ ರವೀಂದ್ರ ಖಾರ್ವಿ, ಹೊಸಪೇಟೆ ಹೋಳಿ ಉತ್ಸವ ಸಮಿತಿ ಅಧ್ಯಕ್ಷ ಚೌಕಿ ಜಗನ್ನಾಥ ಖಾರ್ವಿ ಸ್ನೇಹ ಸಂಘದ ಸ್ಥಾಪಕಾಧ್ಯಕ್ಷ ಗೋಪಾಲ ಖಾರ್ವಿ, ಹೊಸಪೇಟೆ ಮಹಿಳಾ ಹೋಳಿ ಉತ್ಸವ ಸಮಿತಿ ಅಧ್ಯಕ್ಷೆ ಪಾರ್ವತಿ ಬಿ. ಖಾರ್ವಿ, ಬೈಂದೂರು ಪೊಲೀಸ್ ಠಾಣೆಯ ಸಿಬ್ಬಂದಿ ನಾಗರಾಜ ಖಾರ್ವಿ, ಯುತ್ ಕ್ಲಬ್ ಅಧ್ಯಕ್ಷ ವಿಶ್ವನಾಥ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ರಾಘವೇಂದ್ರ ಖಾರ್ವಿ ಸ್ವಾಗತಿಸಿದರು. ಸುಂದರ ಜಿ. ಗಂಗೊಳ್ಳಿ ನಿರೂಪಿಸಿದರು. ರಾಮದಾಸ ಖಾರ್ವಿ ವಂದಿಸಿದರು.









