ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಿವೈಎಫ್‌ಐ ರಾಜ್ಯಮಟ್ಟದ ಯುವಜನ ಶಿಬಿರ ಇಲ್ಲಿನ ಕಾರ್ಮಿಕ ಭವನದಲ್ಲಿ ಜರುಗಿತು. ಚನೈ ಪತ್ರಿಕೋದ್ಯಮ ಕಾಲೇಜಿನ ಪ್ರಾಧ್ಯಾಪಕ ಕೆ. ನಾಗರಾಜ್ ಉಡುಪ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಕಾರ್ಯದರ್ಶಿ ರಾಜಶೇಖರ ಮೂರ್ತಿ, ಸ್ವಾಗತ ಸಮಿತಿ ಗೌರವ ಅಧ್ಯಕ್ಷ ಹೆಚ್ ನರಸಿಂಹ, ಸ್ವಾಗತ ಸಮಿತಿ ಅದ್ಯಕ್ಷರಾದ ಉದಯ್ ಕುಮಾರ್ ಹಟ್ಟಿಯಂಗಡಿ, ಸಂತೋಷ ಹೆಮ್ಮಾಡಿ, ರಾಜೇಶ್ ವಡೇರಹೋಬಳಿ ಮೊದಲಾದವರು ಉಪಸ್ಥಿತರಿದ್ದರು.