ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾವ್ರಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರಾಗಿ ಆಯ್ಕೆಗೊಂಡ ಜ್ಯೋತಿ ಎಮ್. ಅವರಿಗೆ ತ್ರಾಸಿಯ ಮೊವಾಡಿಯಲ್ಲಿ ಹುಟ್ಟೂರ ಸನ್ಮಾನವನ್ನು ನೀಡಿ ಅಭಿನಂದಿಸಲಾಯಿತು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅನಂತ ಮೊವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ ಪೂಜಾರಿ, ಉಪಾಧ್ಯಕ್ಷೆ ಜೀತ ಡಿ’ಸಿಲ್ವಾ, ಸದಸ್ಯರಾದ ವಿಜಯ ಪೂಜಾರಿ, ರತ್ನಾವತಿ, ಶ್ರೀ ಮಾಣಿ ಸಿದ್ಧಲಿಂಗೇಶ್ವರ ದೇವಸ್ಥಾನ ಮೊಕ್ತೆಸರ ಬಿ.ಕೆ.ನಾರಾಯಣ, ಸುಧಾಕರ್ ಮೊವಾಡಿ, ಮೊವಾಡಿ ಹಾಲು ಉತ್ಪಾದಕರ ಸಂಘ ಕಾರ್ಯದರ್ಶಿ ಶೇಖರ್ ಗಾಣಿಗ, ಡಾ. ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಉಮೇಶ್ ಹಾಗೂ ಮಂಜು ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.