ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ.ಎ2: ಇಲ್ಲಿನ ಬಾರ್ ಅಸೋಸಿಯೇಶನ್ ಅಧ್ಯಕ್ಷರಾಗಿ ನ್ಯಾಯವಾದಿ ಬನ್ನಾಡಿ ಸೋಮನಾಥ ಹೆಗ್ಡೆ ಹಾಗೂ ಕಾರ್ಯದರ್ಶಿಯಾಗಿ ರವಿಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.
ಇಂದು ನಡೆದ ಚುನಾವಣೆಯಲ್ಲಿ ಶಿರಿಯಾರ ಮುದ್ದಣ್ಣ ಶೆಟ್ಟಿ ಅವರ ಎದುರು ಬನ್ನಾಡಿ ಸೋಮನಾಥ ಹೆಗ್ಡೆ 68 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಒಟ್ಟು ಚಲಾವಣೆಯಾಗ 181ಮತಗಳಲ್ಲಿ ಸೋಮನಾಥ ಹೆಗ್ಡೆ128 ಮತಗಳನ್ನು ಪಡೆದಿದ್ದರು.