ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಆಲೂರು ಗ್ರಾಮದ ಮೂಡುತಾರಿಬೇರು ಶ್ರೀ ಆದಿಶಕ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು 1ಲಕ್ಷ ರೂ. ಡಿ.ಡಿ ನೀಡಿದ್ದಾರೆ.
ಶ್ರೀ ಕ್ಷೇತ್ರ ಧ. ಗ್ರಾ.ಯೋಜನೆಯ ಕುಂದಾಪುರ ತಾಲೂಕು ಯೋಜನಾಧಿಕಾರಿ ಅಮರ್ ಪ್ರಸಾದ್ ಶೆಟ್ಟಿ ಅವರು ದೇವಸ್ಥಾನದ ಸಮಿತಿಯವರಿಗೆ ಡಿ.ಡಿಯನ್ನು ಇತ್ತೀಚೆಗೆ ಹಸ್ತಾಂತರಿಸಿದರು. ಚಿತ್ತೂರು ವಲಯದ ಮೇಲ್ವಿಚಾರಕ ಪ್ರಭಾಕರ ದೇವಸ್ಥಾನದ ಸಮಿತಿಯವರಾದ ನಾಗರಾಜ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.