ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮಹತ್ತರವಾಗಿದ್ದು, ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಹೆತ್ತವರು ಗಮನಿಸುತ್ತ ಇರಬೇಕು. ಶಿಕ್ಷಣ ಸಂಸ್ಥೆಯ ಜೊತೆ ಪೋಷಕರು ನಿಕಟ ಸಂಬಂಧ ಇಟ್ಟುಕೊಳ್ಳಬೇಕು. ಶಿಕ್ಷಕರು ಕೂಡಾ ಸೇವಾಧರ್ಮದಿಂದ ಕೆಲಸ ನಿರ್ವಹಿಸಿದಾಗ ಉತ್ತಮ ಪ್ರಜೆಗಳ ನಿರ್ಮಾಣ ಸಾಧ್ಯ ಎಂದು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ಅವರು ವಂಡ್ಸೆ ಗ್ರಾಮದ ಆತ್ರಾಡಿಯಲ್ಲಿ ನಡೆದ ವಿಜಯ ಮಕ್ಕಳ ಕೂಟ ದೇವಲ್ಕುಂದ ಇದರ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಸದಸ್ಯರಾದ ಉದಯ ಜಿ.ಪೂಜಾರಿ, ನಿವೃತ್ತ ಶಿಕ್ಷಕರಾದ ರಾಜೀವ ಶೆಟ್ಟಿ ಬಗ್ವಾಡಿ, ಗ್ರಾಮ ಸೇವಾ ಸಂಗಮದ ಅಧ್ಯಕ್ಷೆ ಅನಿತಾ ರಾಘವೇಂದ್ರ ಹೆಬ್ಬಾರ್, ಗ್ರಾಮ ಸೇವಾ ಸಂಗಮದ ಸದಸ್ಯ ಪಿ.ರಾಜಗೋಪಾಲ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಿಗೆ ಆಯೋಜಿಸದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಶ್ ಶೆಟ್ಟಿ ವಂದಿಸಿದರು. ದೀಪಾ ಕಾರ್ಯಕ್ರಮ ನಿರ್ವಹಿಸಿದರು. ನಂತರ ಸಂಸ್ಥೆಯ ವಿದ್ಯಾರ್ಥಿಗಳಿಂದ ಆಕರ್ಷಕ ಮನೋರಂಜನಾ ಕಾರ್ಯಕ್ರಮ ಜರುಗಿತು.