ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ದಿ. ವಿಶಾಲಾಕ್ಷಿ ಬಿ. ಹೆಗ್ಡೆ ಸ್ಮಾರಕ ಬಿಎಂಎಸ್ ಟ್ರೋಫಿ ಅಂತರ್ ಕಾಲೇಜ್ ಕಬ್ಬಡಿ ಪಂದ್ಯಕ್ಕೆ ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿತು.
ಪಂದ್ಯಾಟಕ್ಕೆ ಚಾಲನೆ ನೀಡಿದ ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಮಾತನಾಡಿ ಎದುರಾಳಿ ಎಷ್ಟೇ ಬಲಿಷ್ಠನಾದರೂ, ಅವರನ್ನು ಎದುರಿಸುವ ತಾಕತ್ತು ಇರುವುದ ಕ್ರೀಡೆಯಲ್ಲಿ ಮಾತ್ರ. ಅಪ್ಪಟ ದೇಶೀಯ ಕ್ರೀಡೆಯಾದ ಕಬ್ಬಡಿಯಲ್ಲಿ ಎದುರಾಳಿಗೆ ಸೆಡ್ಡು ಹೊಡೆದು, ಹಿಡಿತದಿಂದ ತಪಿಸಿಕೊಳ್ಳುವ, ಎದುರಾಳಿ ಮುಟ್ಟುವ ಚಾಕಚಕ್ಯತೆ ಇದೆ. ಇದು ಬದುಕಿನ ಪಾಠವೂ ಹೌದು. ಇತ್ತೀಚೆಗೆ ಪ್ರೊ. ಕಬ್ಬಡಿ ಮೂಲಕ ಕಬ್ಬಡಿಗೆ ಹೊಸ ಟ್ರಂಡ್ ಆರಂಭವಾಗಿದೆ. ಅಪ್ಪಟ ಗ್ರಾಮೀಣ ಕ್ರೀಡೆ ಮತ್ತೆ ಹೊಸ ಅಲೆ ಮೂಲಕ ಜನರ ಮನಸ್ಸು ಆಕರ್ಷಿಸುತ್ತದೆ ಎಂದು ಹೇಳಿದರು.
ಕುಂದಾಪುರ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಕುವೆಂಪು ವಿವಿ ದೈಹಿಕ ಶಿಕ್ಷಣ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ. ಗಜಾನನ ಪ್ರಭು, ಕಾಲೇಜ್ ಆಡಳಿತ ಮಂಡಳಿ ಸದಸ್ಯರಾದ ರಾಜೇಶ್ ಕೆ.ಸಿ, ಅನಿಲ್ ಚಾತ್ರ, ಕಾಲೇಜ್ ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ್ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕಿ ಪಾರ್ವತಿ ಬಿಲ್ಲವ ಅತಿಥಿಗಳ ಪರಿಚಯ ಮಾಡಿದರು. ಕನ್ನಡ ಉಪನ್ಯಾಸಕ ಚಂದ್ರಶೇಖರ ಶೆಟ್ಟಿ ಕೋವಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.