ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಗೋಪಾಡಿ ಗ್ರಾಮ ಪಂಚಾಯತ್‌ನಲ್ಲಿ ಗೋಪಾಡಿ ವಾರ್ಡ್-2ರಲ್ಲಿ ತೆರವಾಗಿದ್ದ ಒಂದು ಸ್ಥಾನಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಆಡಳಿತ ಮಂಡಳಿ ಮಾಜಿ ಸದಸ್ಯೆ ಕಲ್ಪನಾ ಭಾಸ್ಕರ್ ಅವಿರೋಧ ಆಯ್ಕೆ ಆಗಿದ್ದಾರೆ.
ಗೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೈಲೆಟ್ ಬೆರೆಟ್ಟೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ವರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಗೋಪಾಡಿಯ ಗ್ರಾ.ಪಂನಲ್ಲಿ ಮಧ್ಯಂತರ ಚುನಾವಣೆ ಘೋಷಣೆ ಆಗಿತ್ತು. ಸಾಮಾಜಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡಿರುವ ಕಲ್ಪನಾ ಭಾಸ್ಕರ್ ಅವರು ಗ್ರಾ.ಪಂ ಸದಸ್ಯರಾಗಿರುವುದಲ್ಲಿ ಅವರ ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದಾರೆ.