ಕುಂದಾಪ್ರ ಡಾಟ್ ಕಾಂ ಸುದ್ದಿ.
ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಕಾರ್ಕಳ ತಾಲೂಕಿನ ಅಜೆಕಾರಿಗೆ ವರ್ಗವಾಗಿರುವ ಡಾ. ಗಿರೀಶ ಗೌಡ ಅವರನ್ನು ಬುಧವಾರ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿ, ವಿದಾಯ ಕೋರಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ, ಉಪಾಧ್ಯಕ್ಷ ಗಣೇಶ ಪೂಜಾರಿ, ಸದಸ್ಯ ನಾಗರಾಜ ಪಟಗಾರ್, ಮಾಜಿ ಅಧ್ಯಕ್ಷ ಎಸ್. ಜನಾರ್ದನ, ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಹರಿಶ್ಚಂದ್ರ ಆಚಾರ್, ಗ್ರಾಮ ಕರಣಿಕ ಮಹಾಂತೇಶ ಕೋಣಿನವರ್, ಕರ ಸಂಗ್ರಾಹಕ ಶೇಖರ, ಇತರರು ಇದ್ದರು.