ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಸಮುದಾಯ ಸಾಂಸ್ಕೃತಿಕ ಸಂಘಟನೆ ಹಾಗೂ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ರಂಗ ರಂಗು ಮಕ್ಕಳ ರಜಾಮೇಳವನ್ನು ಕರ್ನಾಟಕ ರಾಜ್ಯ ಮಕ್ಕಳ ಆಯೋಗದ ಸದಸ್ಯೆ ವನಿತಾ ತೋರ್ವೆ ಉದ್ಘಾಟಿಸಿದರು.
ಶಿಬಿರಕ್ಕೆ ಭೇಟಿ ನೀಡಿದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷೆ ದಾಕ್ಷಾಯಿಣಿ ಬಸವರಾಜ ಮಾತನಾಡಿ ಮಕ್ಕಳು ಸ್ವಭಾವತಃ ಸ್ವತಂತ್ರರು, ಅವರ ಸ್ವಾತಂತ್ಯಕ್ಕೆ ಧಕ್ಕೆ ಬಾರದ ಹಾಗೆ ಬೇಸಿಗೆ ಶಿಬಿರಗಳನ್ನು ವಿನ್ಯಾಸಗೊಳಿಸುವುದು ಸವಾಲಿನ ಕೆಲಸ. ಬಹಳ ವರ್ಷಗಳಿಂದಲೂ ಮಕ್ಕಳ ರಂಗಭೂಮಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಮುದಾಯ ಸಂಘಟನೆ ಮಕ್ಕಳ ಮನೋವಿಕಾಸಕ್ಕೆ ರಂಗಭೂಮಿಯನ್ನು ಬಳಸಿಕೊಳ್ಳುತ್ತಿರುವುದು ಸ್ವಾಗತಾರ್ಹ ಎಚಿದರು.
ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಿ.ಡಿ.ಪಿ.ಓ ಲಕ್ಷ್ಮಿ ಟಿ ನಾಯ್ಕ ಸ್ವಾಗತಿಸಿದರು. ಸಮುದಾಯ ಕುಂದಾಪುರ ಅಧ್ಯಕ್ಷ ಉದಯ ಗಾಂವಕಾರ, ಬಾಲವಿಕಾಸ ಅಕಾಡೆಮಿ ಸದಸ್ಯ ವಿಶ್ವನಾಥ ಪೂಜಾರಿ ಸಮುದಾಯದ ಕಾರ್ಯದರ್ಶಿ ಸದಾನಂದ ಬೈಂದೂರು, ಕೋಶಾಧಿಕಾರಿ ಬಾಲಕೃಷ್ಣ ಕೆ.ಎಮ್ , ನರಸಿಂಹ ಎಚ್ ಮುಂತಾದವರು ಉಪಸ್ಥಿತರಿದ್ದರು. ಜಿ.ವಿ ಕಾರಂತ ವಂದಿಸಿದರು. ಭಾಗ್ಯವತಿ ಕಾರ್ಯಕ್ರಮ ನಿರೂಪಿಸಿದರು.