ಯುವಕರು ನಾಯಕತ್ವ ಗುಣ ಬೆಳೆಸಿಕೊಂಡಾಗ ಸಂಘಟನೆ ಶಕ್ತಿಶಾಲಿಯಾಗುತ್ತದೆ: ಡಿವೈಎಸ್ಪಿ ಮಂಜುನಾಥ ಶೆಟ್ಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಾಯಕರಿಗೆಲ್ಲಾ ನಾಯಕತ್ವದ ಗುಣ ಇರಬೇಕೆಂದಿಲ್ಲ. ಆದರೆ ನಾಯಕತ್ವದ ಗುಣ ಹೊಂದಿದವರು ಖಂಡಿತ ನಾಯಕರಾಗುತ್ತಾರೆ. ಸಮಯ ಪ್ರಜ್ಞೆ ಹಾಗೂ ತಾಳ್ಮೆ ನಾಯಕತ್ವದ ಪ್ರಮುಖ ಅಂಶಗಳು. ಯಾವುದೇ ಜಾತಿ ಧರ್ಮವನ್ನಾಧರಿಸಿ ನಾಯಕತ್ವ ಗುಣ ಬೆಳೆಯುವುದಿಲ್ಲ. ಬದಲಾಗಿ ಅದು ನಮ್ಮ ಮನಸ್ಸಿನ ಮೂಲಕ ಬೆಳೆಯುತ್ತದೆ ಎಂದು ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ, ಕುಂದಾಪುರ ಪೊಲೀಸ್ ಉಪ ವಿಭಾಗದ ಉಪ ಅಧೀಕ್ಷಕ ಎಂ. ಮಂಜುನಾಥ ಶೆಟ್ಟಿ ಹೇಳಿದರು.

Call us

Click Here

ಅವರು ಕಾಳಾವರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ಕಾಳಾವರ ಇದರ ವತಿಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಯುವ ಮುಂದಾಳುಗಳಿಗಾಗಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ನಾಯಕತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥ ಮೋಹನಚಂದ್ರ ಕಾಳಾವರ್ಕರ್ ಸಂಸ್ಥೆಯ ಧ್ಯೇಯೋದ್ಧೇಶ ಮತ್ತು ನಡೆದು ಬಂದ ದಾರಿಯನ್ನು ಸವಿಸ್ತಾರವಾಗಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಡಿವೈಎಸ್ಪಿ ಮಂಜುನಾಥ ಶೆಟ್ಟಿ ಹಾಗೂ ಕಾಳಾವರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾಳಾವರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿ. ರವಿರಾಜ ಶೆಟ್ಟಿ, ಶಾಲೆಯ ಮುಖ್ಯೋಪಾದ್ಯಾಯ ಕೆ. ಸುಧಾಕರ ಶೆಟ್ಟಿ, ಪತ್ರಕರ್ತ ಜಯಶೇಖರ ಮಡಪ್ಪಾಡಿ ಶಿಬಿರಕ್ಕೆ ಶುಭ ಕೋರಿದರು. ಸಂಸ್ಥೆಯ ಸಂಚಾಲಕ ಎಸ್.ವಿ.ನಾಗರಾಜ್ ಕಾರ್ಯಕ್ರಮ ಸಂಯೋಜಿಸಿದರು.

Leave a Reply