ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಮೃತ ಮಹೋತ್ಸವ ಆಚರಿಸುತ್ತಿರುವ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ತಮ್ಮ ತಂದೆ ಎಸ್. ರಾಮ ಪೂಜಾರಿ ನೆನಪಿಗೆ ನಿರ್ಮಿಸಿಕೊಟ್ಟ ಧ್ವಜಸ್ತಂಭವನ್ನು ಉದ್ಘಾಟಿಸಿದರು. ಅಮೃತ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಎಸ್. ಜನಾರ್ದನ, ಕಾರ್ಯದರ್ಶಿ ಎಂ. ಅಣ್ಣಪ್ಪ ಬಿಲ್ಲವ, ಕೋಶಾಧಿಕಾರಿ ಅಣ್ಣಪ್ಪ ಖಾರ್ವಿ, ಆರ್ಥಿಕ ಸಮಿತಿ ಅಧ್ಯಕ್ಷ ಎಂ. ನರಸಿಂಹ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ, ಮಾಜಿ ಅಧ್ಯಕ್ಷ ಎಂ. ವಿನಾಯಕ ರಾವ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ ಪೂಜಾರಿ, ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ, ಇತರರು ಇದ್ದರು.