ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಎ. ೨೪ರಂದು ಮಧ್ಯಾಹ್ನ ೩ಗಂಟೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕ ಶ್ರೀಧರ ಹಂದೆಯವರಿಗೆ ಪ್ರತಿಷ್ಠಿತ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಹಾಗು ನಗದು ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾವೇರಿಯ ಕರ್ನಾಟಕ ಜನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಚಿನ್ನಪ್ಪ ಗೌಡ ವಹಿಸಲಿದ್ದು ನವದೆಹಲಿಯ ಹರಿಗುರು ಸೇವಾ ಪ್ರತಿಷ್ಠಾನದ ಮುಖ್ಯಸ್ಥ ಕೆ. ಶ್ರೀನಿವಾಸ ಅನಂತ ಪ್ರಭು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಪೂಜಾರಿ, ಹೋಟೆಲ್ ಉದ್ಯಮಿ ಆನಂದರಾಮ ಉಳ್ಳೂರು, ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಸೀನಿಯರ್ ಮ್ಯಾನೆಜರ್ ಬಾಬುರಾಯ ಶೆಣೈ, ಕುಂದಾಪುರದ ಚಾರ್ಟೆಡ್ ಅಕೌಂಟೆಂಟ್ ಪಿ. ಪ್ರಭಾಕರ್ ಮಯ್ಯ ಭಾಗವಹಿಸಲಿದ್ದಾರೆ ಎಂದು ಅಕಾಡೆಮಿಯ ನಿರ್ದೇಶಕ ಭಾಸ್ಕರ ಕೊಗ್ಗ ಕಾಮತ್ ತಿಳಿಸಿದ್ದಾರೆ