ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಕ್ರಾಂತಿಕಾರಿ ಬದಲಾವಣೆ : ಅಪ್ಪಣ್ಣ ಹೆಗ್ಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಆರಂಭಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದು ರಾಜ್ಯದ ೩೦ ಜಿಲ್ಲೆಗಳಿಗೂ ವಿಸ್ತರಿಸಿದೆ. ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು, ಆರ್ಥಿಕವಾಗಿ ಹಿಂದುಳಿದ, ಸಮಾಜದಲ್ಲಿ ಕಡೆಗಣಿಸಲ್ಪಟ್ಟ ಜನರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಟ್ಟು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.

Call us

Click Here

ಅವರು ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಗಂಗೊಳ್ಳಿ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಎ ಮತ್ತು ಬಿ ಒಕ್ಕೂಟಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನೆಯಿಂದ ಜನರು ಸಹಬಾಳ್ವೆ ನಡೆಸುವಂತಾಗಿದ್ದು, ಜನರಲ್ಲಿ ಸಾಮಾಜಿಕ ಪರಿವರ್ತನೆಗೆ ಕಾರಣವಾಗಿದೆ. ಸಮಾಜದಲ್ಲಿ ಕಡೆಗಣಿಸಲ್ಪಟ್ಟವರಿಗೆ ಉಸಿರು ನೀಡಿ ಹಸಿರು ಜೀವನ ನಡೆಸಲು ಸಹಕಾರಿಯಾಗಿರುವ ಗ್ರಾಮಾಭಿವೃದ್ಧಿ ಯೋಜನೆಯು ಜನರ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಿದೆ ಎಂದರು.

ಗಂಗೊಳ್ಳಿ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ನಾಗರಾಜ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ., ತ್ರಾಸಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ನಿವೃತ್ತ ಉಪನ್ಯಾಸಕ ಎಸ್.ಜನಾರ್ದನ ಮರವಂತೆ, ಪತ್ರಕರ್ತ ಬಿ.ರಾಘವೇಂದ್ರ ಪೈ ಶುಭ ಹಾರೈಸಿದರು. ಗಂಗೊಳ್ಳಿ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಇಂದಿರಾ ಪೂಜಾರಿ, ನೂತನ ಅಧ್ಯಕ್ಷ ಕೃಷ್ಣ ಪೂಜಾರಿ ಹಾಗೂ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ವನಜಾ ಸ್ವಾಗತಿಸಿದರು. ಸೇವಾ ಪ್ರತಿನಿಧಿ ರಾಧಾ ವರದಿ ವಾಚಿಸಿದರು. ತ್ರಾಸಿ ವಲಯ ಮೇಲ್ವಿಚಾರಕ ಚಂದ್ರ ಮರಾಠೆ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ನೂತನ ಅಧ್ಯಕ್ಷ ಅರುಣಕುಮಾರ್ ಬಿ. ವಂದಿಸಿದರು.

Leave a Reply