ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮರವಂತೆ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಇಲ್ಲಿನ ಕೊರಗ ಕಾಲನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಆರೋಗ್ಯ ತಪಾಸಣೆ ಈಚೆಗೆ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಉದ್ಘಾಟಿಸಿ, ಆರೋಗ್ಯ ಮಾಹಿತಿ ನೀಡಿದರು. ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಸ್ವಾಗತಿಸಿ, ಕಾರ್ಯದರ್ಶಿ ಹರಿಶ್ಚಂದ್ರ ಆಚಾರ್ಯ ವಂದಿಸಿದರು. ಕೊರಗ ಯುವ ಕಲಾವೇದಿಕೆಯ ಶೇಖರ ಮರವಂತೆ ನಿರೂಪಿಸಿದರು. ವೈದ್ಯಾಧಿಕಾರಿ ಮತ್ತು ಆರೋಗ್ಯ ಕೇಂದ್ರದ ಸಿಬಂದಿ, ಆಶಾ ಕಾರ್ಯಕರ್ತೆಯರು ತಪಾಸಣೆ ನಡೆಸಿ, ಅಗತ್ಯ ಇರುವವರಿಗೆ ಔಷಧಿ ವಿತರಿಸಿದರು.