ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಯಶ್ರೀ ಸುಧಾಕರ ಮೊಗವೀರ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣಕುಮಾರ್ ಶೆಟ್ಟಿ ಕಡ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕುಂದಾಪುರದ ಸಹಾಯಕ ಕಮೀಷನರ್ ಚುನಾವಣಾಧಿಕಾರಿಯಾಗಿದ್ದರು.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಪಕ್ಷದ ಸದಸ್ಯ ಮೊಳಹಳ್ಳಿ ತಾಪಂ ಕ್ಷೇತ್ರ ಜಯಶ್ರೀ ಸುಧಾಕರ ಮೊಗವೀರ ಎರಡು ನಾಮಪತ್ರ ಸಲ್ಲಿಸಿದ್ದರೇ, ಉಪಾಧ್ಯಕ್ಷ ಸ್ಥಾನಕ್ಕೆ ನಾಡಾ ತಾಪಂ ಸದಸ್ಯ ಬಿಜೆಪಿಯ ಪ್ರವೀಣ ಕುಮಾರ್ ಕಡ್ಕೆ ಮೂರು ನಾಮಪತ್ರ ಸಲ್ಲಿಸಿದ್ದರು. ಮಧ್ಯಾಹ್ನ ಮೂರು ಗಂಟೆಯ ವರೆಗೆ ಯಾವುದೇ ಆಕ್ಷೇಪ ವ್ಯಕ್ತವಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಯಾಗಿರುವ ಬಗ್ಗೆ ಘೋಷಿಸಿದರು.
ಕುಂದಾಪುರ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿದ್ದು ಅವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಯಶಸ್ಸಿಯಾಗಿ ಅನಿಷ್ಠಾನಗೊಳಿಸುವಲ್ಲಿ ಎಲ್ಲರೂ ಒಗ್ಗಟ್ಟಾಗಿ ದುಡಿಯುವುದಾಗಿ ನೂತರ ಅಧ್ಯಕ್ಷ ಉಪಾಧ್ಯಕ್ಷರು ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ
ಬಳಿಕ ನಡೆದ ಅಭಿನಂದನಾ ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಸದಸ್ಯರಾದ ಬಾಬು ಶೆಟ್ಟಿ, ತಾಪಂ ಸದಸ್ಯರಾದ ರಾಜು ದೇವಾಡಿಗ, ಜ್ಯೋತಿ ಪುತ್ರನ್ ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಪುರಸಭಾ ಉಪಾಧ್ಯಕ್ಷ ರಾಜೇಶ್ ಕಾವೇರಿ, ನ್ಯಾಯವಾದಿ ಟಿ.ಬಿ. ಶೆಟ್ಟಿ, ಮಾಜಿ ಅಧ್ಯಕ್ಷ ಬಾಸ್ಕರ ಬಿಲ್ಲವ, ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ಅಧ್ಯಕ್ಷ ಕಿಶೋರ್ ಕುಮಾರ್ ಮೊದಲಾದವರು ಅಭಿನಂದನಾ ನುಡಿಗಳನ್ನಾಡಿದರು. ಜಿಲ್ಲಾ ಪಂಚಾಯತ್ ಸದದ್ಯರಾದ ಶಂಕರ ಪೂಜಾರಿ, ತಾರನಾಥ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರುಗಳು, ತಾಪಂ ಇಓ ನಾರಾಯಣ ಸ್ವಾಮಿ, ಬಿಜೆಪಿ ಪಕ್ಷದ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ
ತಾಲೂಕು ಪಂಚಾಯತ್‌ನ ಒಟ್ಟು 37 ಸ್ಥಾನಗಳ ಪೈಕಿ ಬಿಜೆಪಿ 26, ಕಾಂಗ್ರೆಸ್ 11 ಸ್ಥಾನಗಳನ್ನು ಪಡೆದುಕೊಂಡಿತ್ತು. ಮೊದಲು ಪ್ರಕಟಿಸಿದ ಮೀಸಲು ಬಿಜೆಪಿಗೆ ವ್ಯತಿರಿಕ್ತವಾಗಿ ಪರಿಣಮಿಸಿತ್ತು. ಎಸ್ಸಿ ಮಹಿಳೆ ಅಧ್ಯಕ್ಷ ಸ್ಥಾನಕ್ಕೆ ಮೀಸಲು ಬಂದಿದ್ದು, ಕಾವ್ರಾಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಧ್ಯಕ್ಷರಾಗುವ ಅವಕಾಶ ಸಿಕ್ಕಿತ್ತು. ಮೀಸಲು ನೀತಿ ಪ್ರಶ್ನಿಸಿ, ಪ್ರವೀಣ್ ಕುಮಾರ್ ಶೆಟ್ಟಿ ಕಡ್ಕೆ ಮತ್ತು ಶರತ್ ಕುಮಾರ್ ಶೆಟ್ಟಿ ಅಕ್ಷೇಪ ದೂರು ನೀಡಿದ್ದರು. ಬದಲಾದ ಮೀಸಲಿನಲ್ಲಿ ಸಾಮಾನ್ಯ ಮಹಿಳೆ ಬಂದಿದ್ದರಿಂದ ಬಿಜೆಪಿ ಪರ ಮಿಸಲಾತಿ ಬಂದಿತ್ತು. / ಕುಂದಾಪ್ರ ಡಾಟ್ ಕಾಂ ಸುದ್ದಿ/