ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಶ್ರೀ ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿ, ಅಂಜಲಿ ಆಸ್ಪತ್ರೆ, ಬೈಂದೂರು, ಸಿನಿಯರ್ ಸಿಟಿಜನ್ ಅಸೋಸಿಯೇಷನ್ ಬೈಂದೂರು ಇವರ ಆಶ್ರಯದಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ ಕೋಟ, ಲಯನ್ಸ್ ಟ್ರಸ್ಟ್ ಫಾರ್ ಸರ್ವಿಸಸ್ ಚಾರಿಟೀಸ್ (ರಿ.), ಲಯನ್ಸ್ ಕ್ಲಬ್ ಬ್ರಹ್ಮಾವರ-ಬಾರ್ಕೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಅಂಧತ್ವ ನಿವಾರಣಾ ವಿಭಾಗ ಉಡುಪಿ, ಲಯನ್ಸ್ ಲಯನೆಸ್ ಕ್ಲಬ್ ಬ್ರಹ್ಮಾವರ-ಬಾರ್ಕೂರು ಸಹಯೋಗದಲ್ಲಿ ಮೇ 14 ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಸಂಪೂರ್ಣ ಉಚಿತ ಕಣ್ಣಿನ ತಪಾಸಣಾ ಶಿಬಿರ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಕಣ್ಣಿನ ತಪಾಸಣೆಗೆ ಒಳಪಡುವ ರೋಗಿಗಳಿಗೆ ಅಗತ್ಯವಿದ್ದಲ್ಲಿ ಪೊರೆ ರೋಗ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ನಡೆಸಲಾಗುವುದು. ಗ್ಲೊಕೋಮಾ ಕಾಯಿಲೆಯನ್ನು ಆಧುನಿಕ ‘ಹಮ್‌ಫ್ರೀ ಫೀಲ್ಡ್ ಅನಾಲೈಸರ್’ ಉಪಕರಣದಿಂದ ರಿಯಾಯಿತಿ ದರದಲ್ಲಿ ತಪಾಸಣೆ ಮಾಡಲಾಗುವುದು. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ.





