ಸತತವಾಗಿ ಸಾಧಕ ಶಾಲಾ ಪ್ರಶಸ್ತಿ ವಿಜೇತ ಕುಂದಾಪುರದ ವಿ.ಕೆ.ಆರ್.ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢ ಶಾಲೆ

Call us

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ವರದಿ |
ಸಮಾಜದ ಎಲ್ಲಾ ಸ್ತರದ ಮಕ್ಕಳೂ ಆಂಗ್ಲ ಮಾಧ್ಯಮ ಶಿಕ್ಷಣ ಪಡೆಯಬೇಕು ಎನ್ನುವ ಧ್ಯೇಯದೊಂದಿಗೆ 1982ರಲ್ಲಿ ಪ್ರಾರಂಭಗೊಂಡ ‘ವ್ಯಾಸ ಕುಂಜಿಬೆಟ್ಟು ರಾಮಚಂದ್ರ ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢ ಶಾಲೆಯು’ (ವಿ.ಕೆ.ಆರ್. ಆಚಾರ್ಯ) ಕುಂದಾಪುರದ ಪ್ರಥಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಾಗಿದ್ದು ಗುಣಮಟ್ಟದ ಶಿಕ್ಷಣದ ಮೂಲಕ ಇಂದಿಗೂ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Call us

Click Here

Click here

Click Here

Call us

Visit Now

Click here

ಸತತ 10 ವರ್ಷಗಳಿಂದ ಶೇಕಡಾ 100ರ ಫಲಿತಾಂಶವನ್ನು ದಾಖಲಿಸುತ್ತಾ ಬಂದ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವಿಕೆಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆ. ಕೇವಲ ಪಾಠವಲ್ಲದೆ ಪಾಠೇತರ ಚಟುವಟಿಕೆಗಳಲ್ಲಿಯೂ ಅಗ್ರಮಾನ್ಯವೆನಿಸಿದ ಈ ಸಂಸ್ಥೆಯು ಹಲವಾರು ವಿಶೇಷತೆಗಳಿಂದ ಕೂಡಿದೆ. ನಿರಂತರ ೫ ವರ್ಷಗಳಿಂದ ಸಾಧಕಶಾಲಾ ಪ್ರಶಸ್ತಿಯನ್ನು ಪಡೆಯುತ್ತಿರುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಕುಂದಾಪ್ರ ಡಾಟ್ ಕಾಂ ವರದಿ

ಕುಂದಾಪುರದ ಮುಖ್ಯಭಾಗದಲ್ಲಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಶಾಲಾವಾಹನದ ವ್ಯವಸ್ಥೆ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ನೀಡಿದೆ. ಶಿಸ್ತಿಗೆ ಮೊದಲ ಪ್ರಾಶಸ್ತ್ಯವಿರುವ ಈ ಸಂಸ್ಥೆಯಲ್ಲಿ ಸುಸಜ್ಜಿತ ಒಳಾಂಗಣ ಕ್ರೀಡಾವ್ಯವಸ್ಥೆ ಇದ್ದು, ವಿದ್ಯಾರ್ಥಿಗಳು ಚೆಸ್, ಕರಾಟೆ ಹಾಗೂ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ವಿಜೇತರಾಗಿ ಮಿಂಚುವ ಮೂಲಕ ಶಾಲೆಯ ಕೀರ್ತಿಯನ್ನು ಇಮ್ಮಡಿಗೊಳಿಸಿದ್ದಾರೆ. ಅಂತರ್ಜಾಲ ಸೌಲಭ್ಯವನ್ನು ಒಳಗೊಂಡ ಅತ್ಯುತ್ತಮ ಕಂಪ್ಯೂಟರ್ ಲ್ಯಾಬ್, ಉತ್ತಮ ಪುಸ್ತಕಗಳನ್ನೊಳಗೊಂಡ ವಾಚನಾಲಯ ಹಾಗೂ ಪ್ರಯೋಗಾಲಯದ ವ್ಯವಸ್ಥೆ ಇದೆ. ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ ಹಾಗೂ ಟಿನೋವೇಟರ‍್ಸ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ವಿಜೇತರಾಗಿದ್ದಾರೆ. ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಸಹಕಾರಿಯಾಗುವ ಎನ್.ಸಿ.ಸಿ, ಸ್ಕೌಟ್ ಹಾಗೂ ಗೈಡ್ಸ ತರಬೇತಿಯನ್ನು ನಿರಂತರವಾಗಿ ನೀಡಲಾಗುತ್ತಿದೆ. ಇದರೊಂದಿಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಬಲ್ಲ ಯೋಗ, ಪ್ರಾಣಾಯಾಮ, ಕರಾಟೆ, ಚಿತ್ರಕಲೆ, ಕರಕುಶಲ ಕಲೆಗಳಿಗೆ ಹೆಚ್ಚಿನ ಆದ್ಯತೆ ಇದೆ. ವಿದ್ಯಾರ್ಥಿಗಳ ಮೌಲ್ಯಯುತ ಬರಹದ ಹಸ್ತಲಿಖಿತ ಪ್ರತಿ ಚಿಗುರು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಕಾಯ್ದುಕೊಂಡು ಬರುತ್ತಿದೆ. ಕುಂದಾಪ್ರ ಡಾಟ್ ಕಾಂ ವರದಿ.

ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರ ನೇತೃತ್ವದಲ್ಲಿ ಅನುಭವೀ ಶಿಕ್ಷಕ- ಶಿಕ್ಷಕೇತರ ವರ್ಗದವರ ನಿರಂತರ ಕಾರ್ಯದಕ್ಷತೆಯಿಂದ ಈ ಸಂಸ್ಥೆಯು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತನ್ನ ಗುಣಮಟ್ಟವನ್ನು ಕಾಯ್ದುಕೊಂಡಿದೆ.

ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಸಂಸ್ಥೆ
BM-Sukumar-Shettyಕುಂದಾಪುರ ಪರಿಸರದಲ್ಲಿ ಗುಣಮಟ್ಟದ ಮತ್ತು ಮೌಲ್ಯಪೂರ್ಣ ಶೈಕ್ಷಣಿಕ ಅವಕಾಶಗಳು ವಿಪುಲವಾಗಿ ತೆರೆದುಕೊಳ್ಳದ ಕಾಲಘಟ್ಟದಲ್ಲಿ ಅಂದರೆ ೧೯೭೫ರ ವೇಳೆಗೆ ಹುಟ್ಟಿಕೊಂಡ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ. ಕುಂದಾಪುರದ ಹೃದಯ ಭಾಗದಲ್ಲಿ ತನ್ನ ನೆಲೆಯನ್ನು ಕಂಡುಕೊಂಡ ಈ ಸೊಸೈಟಿ ಮೊದಲು ಆರಂಭಿಸಿದ್ದು ನರ್ಸರಿ ತರಗತಿಯನ್ನು. ಇಂದು ಅದು ಪದವಿ ಶಿಕ್ಷಣದ ವರೆಗೆ ಬೆಳೆದು ನಿಂತು ರಾಜ್ಯದಾದ್ಯಂತ ತನ್ನ ಕೀರ್ತಿಯನ್ನು ಪಸರಿಸುತ್ತಿದೆ. ಕುಂದಾಪುರ ತಾಲೂಕಿನ ವಿಭಿನ್ನ ಗ್ರಾಮೀಣ ಪ್ರದೇಶಗಳ ಬಡಕುಟುಂಬಗಳನ್ನು ಪ್ರತಿನಿಧಿಸುವ ಪ್ರತಿ ಮಗುವಿಗೂ ಆಂಗ್ಲ ಮಾಧ್ಯಮ ಶಿಕ್ಷಣದ ಅವಕಾಶಗಳನ್ನು ತೆರೆದಿಡಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಜನ್ಮ ತಾಳಿದ ಈ ಸಂಸ್ಥೆ ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಸಾಮಾಜಿಕ ಬದ್ಧತೆಯೊಂದಿಗೆ ನಾಲ್ಕು ಶಿಕ್ಷಣ ಸಂಸ್ಥೆಗಳ ಮೂಲಕ ಶೈಕ್ಷಣಿಕ ಕ್ರಾಂತಿಯೊಂದಕ್ಕೆ ಕಾರಣವಾಗಿದೆ. ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಸಂಸ್ಥೆಗಳಲ್ಲಿ ವಿಪುಲವಾದ ಅವಕಾಶಗಳಿದ್ದು, ಎಲ್ಲಾ ರಂಗದಲ್ಲಿಯೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಂಸ್ಥೆಯು ಗುರುತಿಸಿಕೊಂಡು ಎಲ್ಲರ ಗಮನ ಸೆಳೆದಿದೆ.

Call us

ಶಿಕ್ಷಣ ಕ್ರಾಂತಿಯ ರೂವಾರಿ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ
ಕುಂದಾಪುರ ಎಜುಕೇಶನ್ ಸೊಸೈಟಿಯ ಯಶಸ್ಸಿನ ಹಿಂದಿನ ರೂವಾರಿ ಅದರ ಅಧ್ಯಕ್ಷರು ಹಾಗೂ ಸಂಚಾಲಕರಾದ ಶ್ರೀ ಬಿ. ಎಂ ಸುಕುಮಾರ ಶೆಟ್ಟಿಯವರು. ಕುಂದಾಪುರ ಎಜುಕೇಶನ್ ಸೊಸೈಟಿಯ ವ್ಯಾಪ್ತಿಯಲ್ಲಿ ಬರುವ ನಾಲ್ಕು ಸಂಸ್ಥೆಗಳನ್ನು ನಾಡಿನ ಮಾದರಿ ಸಂಸ್ಥೆಯಾಗಿ ರೂಪಿಸಿದ ಹೆಗ್ಗಳಿಕೆ ಇವರದ್ದು. ಸಮಾಜದ ಕಟ್ಟಕಡೆಯ ಮಗುವನ್ನೂ ವಿದ್ಯಾವಂತನನ್ನಾಗಿಸಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಗಲಿರುಳೂ ಶಿಕ್ಷಣ ಸಂಸ್ಥೆಗಳ ಏಳಿಗೆಗಾಗಿ ಶ್ರಮಿಸುತ್ತಿರು ಇವರ ಇಚ್ಛಾಶಕ್ತಿ ಜನಮೆಚ್ಚುಗೆಗೆ ಪಾತ್ರವಾಗಿದೆ. ಶಿಕ್ಷಣದ ಬಗ್ಗೆ ಅಪಾರ ಕಾಳಜಿ, ಕಳಕಳಿ ಹೊಂದಿರುವ ಶ್ರೀಯುತರು ತಮ್ಮ ಯೋಚನೆ, ಯೋಜನೆಗಳನ್ನು ಕಾರ್ಯರೂಪಕ್ಕಿಳಿಸಿ ಶಿಕ್ಷಣ ಸಂಸ್ಥೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದಾರೆ. ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ರೂಪಿಸಿದ ಈ ಸಂಸ್ಥೆಯಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದೇ ಶ್ರೀಯುತರ ದಕ್ಷ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಈ ಎಲ್ಲಾ ಸಂಸ್ಥೆಗಳನ್ನು ಕರ್ನಾಟಕ ರಾಜ್ಯದಲ್ಲಿಯೇ ಮಾದರಿ ಸಂಸ್ಥೆಯನ್ನಾಗಿ ರೂಪಿಸಬೇಕೆಂಬ ಉತ್ಕಟ ಹಂಬಲವನ್ನು ಅವರು ಹೊಂದಿದ್ದಾರೆ.

  • ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢ ಶಾಲೆ ಸಂಪರ್ಕಿಸಿ : 08254 – 231406

 

► ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಸಂಸ್ಥೆ ಕುಂದಾಪುರದ ಆರ್.ಎನ್. ಶೆಟ್ಟಿ. ಪಿ.ಯು. ಕಾಲೇಜು – http://kundapraa.com/?p=13989

Leave a Reply

Your email address will not be published. Required fields are marked *

four × 5 =