ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದು, ಸಮಾಜದಲ್ಲಿ ಸಾಮಾಜಿಕ ಪರಿವರ್ತನೆಗೆ ಕಾರಣವಾಗಿದೆ. ಸ್ವಸಸಹಾಯ ಸಂಘಗಳ ಸ್ಥಾಪನೆಯಿಂದ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಬೆಳೆಯಲು ಸಹಕಾರಿಯಾಗಿದೆ. ಒಕ್ಕೂಟದ ಸದಸ್ಯರು ಒಗ್ಗಟ್ಟಿನಿಂದ ಯಾವುದೇ ಫಲಾಪೇಕ್ಷೆಯಿಲ್ಲದೆ ಕಾರ್ಯನಿರ್ವಹಿಸದರೆ ಇನ್ನಷ್ಟು ಅಭಿವೃದ್ಧಿ ಕಾಣಲು ಸಾಧ್ಯವಿದೆ ಎಂದು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್ ಹೇಳಿದರು.
ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಗಂಗೊಳ್ಳಿ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವಸಹಾಯ ಸಂಘಗಳ ಎಂ.ಜಿ.ರೋಡ್ ಮತ್ತು ಬಂದರು ಒಕ್ಕೂಟಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಮಾತನಾಡಿದ ತ್ರಾಸಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಮ್ಮ ಸರ್ವತೋಮುಖ ಬೆಳವಣಿಗೆಗೆ ಅವಶ್ಯವಿರುವ ಅನೇಕ ಕಾರ್ಯಕ್ರಮಗಳಿವೆ. ಮಹಿಳೆ ಸ್ವಾವಲಂಬಿ ಜೀವನ ನಡೆಸಲು ಮತ್ತು ಎಲ್ಲಾ ಕ್ಷೇತ್ರದಲ್ಲೂ ಮುಂದುವರೆಯಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅನುಕೂಲ ಕಲ್ಪಿಸಿದೆ ಎಂದರು.
ಎಂಜಿ ರೋಡ್ ಒಕ್ಕೂಟದ ಅಧ್ಯಕ್ಷ ಗಣೇಶ ಮಡಿವಾಳ ಅಧ್ಯಕ್ಷತೆ ವಹಿಸಿಸ್ದರು. ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಕುಂದಾಪುರ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದ ಕಾರ್ಯನಿರ್ವಹಣಾಧಿಕಾರಿ ಈಶ್ವರ ನಾಯ್ಕ್, ಪ್ರಗತಿಬಂಧು ಸ್ವಸಹಾಯ ಸಂಘಗಳ ತ್ರಾಸಿ ವಲಯ ಅಧ್ಯಕ್ಷ ಬಾಬು ಚಂದನ್ ಶುಭ ಹಾರೈಸಿದರು. ಬಂದರು ಒಕ್ಕೂಟದ ಅಧ್ಯಕ್ಷೆ ಶೋಭಾ, ಸ್ವಾತಿ ಮಡಿವಾಳ ಅನಿಸಿಕೆ ವ್ಯಕ್ತಪಡಿಸಿದರು. ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮಂಜುನಾಥ ಜಿ.ಟಿ., ಎಂಜಿ ರೋಡ್ ಒಕ್ಕೂಟದ ನೂತನ ಅಧ್ಯಕ್ಷ ನಾಗಪ್ಪಯ್ಯ ಪಟೇಲ್, ಬಂದರು ಒಕ್ಕೂಟದ ನೂತನ ಅಧ್ಯಕ್ಷೆ ಸುಜಾತಾ ಮತ್ತು ಗಂಗೊಳ್ಳಿ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವಸಹಾಯ ಸಂಘಗಳ ಎಂ.ಜಿ.ರೋಡ್ ಮತ್ತು ಬಂದರು ಒಕ್ಕೂಟಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಸರಸ್ವತಿ ಸ್ವಾಗತಿಸಿದರು. ಸೇವಾ ಪ್ರತಿನಿಧಿ ರತ್ನಿ ವರದಿ ವಾಚಿಸಿದರು. ತ್ರಾಸಿ ವಲಯ ಮೇಲ್ವಿಚಾರಕ ಚಂದ್ರ ಮರಾಠಿ ಕಾರ್ಯಕ್ರಮ ನಿರೂಪಿಸಿದರು. ನಾಗರಾಜ ಶೇಟ್ ವಂದಿಸಿದರು.