ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ವಿ.ಕೆ.ಆರ್.ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100ಫಲಿತಾಂಶ ಗಳಿಸಿದೆ. ಹಾಜರಾದ 143 ವಿದ್ಯಾರ್ಥಿಗಳಲ್ಲಿ 67 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 76 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿವೇಕ್ ಗಿರಿಧರ್ ಪೈ 622 ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿರುತ್ತಾನೆ. ಶಾಲಾ ಸಂಚಾಲಕರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.











1 Comment
In the news about vkr my photo is changed…Shashank (601)and Sumanth Hebbar (600 ) photos and exchanged…please correct it.