ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಗಂಗೊಳ್ಳಿ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವಸಹಾಯ ಸಂಘಗಳ ಎಂ.ಜಿ.ರೋಡ್ ಮತ್ತು ಬಂದರು ಒಕ್ಕೂಟಗಳ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ನಾರಾಯಣ ಆಚಾರ್ಯ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಅಮರಪ್ರಸಾದ್ ಹೆಗ್ಡೆ, ತ್ರಾಸಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮಂಜುನಾಥ ಜಿ.ಟಿ., ಕುಂದಾಪುರ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದ ಕಾರ್ಯನಿರ್ವಹಣಾಧಿಕಾರಿ ಈಶ್ವರ ನಾಯ್ಕ್, ಪ್ರಗತಿಬಂಧು ಸ್ವಸಹಾಯ ಸಂಘಗಳ ತ್ರಾಸಿ ವಲಯ ಅಧ್ಯಕ್ಷ ಬಾಬು ಚಂದನ್, ತ್ರಾಸಿ ವಲಯ ಮೇಲ್ವಿಚಾರಕ ಚಂದ್ರ ಮರಾಠೆ, ಎಂಜಿ ರೋಡ್ ಒಕ್ಕೂಟದ ಅಧ್ಯಕ್ಷ ಗಣೇಶ ಮಡಿವಾಳ, ಬಂದರು ಒಕ್ಕೂಟದ ಅಧ್ಯಕ್ಷೆ ಶೋಭಾ, ಪದ್ಮಾವತಿ, ಎಂಜಿ ರೋಡ್ ಒಕ್ಕೂಟದ ನೂತನ ಅಧ್ಯಕ್ಷ ನಾಗಪ್ಪಯ್ಯ ಪಟೇಲ್, ಬಂದರು ಒಕ್ಕೂಟದ ನೂತನ ಅಧ್ಯಕ್ಷೆ ಸುಜಾತಾ, ಸೇವಾ ಪ್ರತಿನಿಧಿಗಳಾದ ಸರಸ್ವತಿ, ರತ್ನಿ ಮೊದಲಾದವರು ಉಪಸ್ಥಿತರಿದ್ದರು.