ಕುಂದಾಪುರ ಆರ್.ಎನ್. ಶೆಟ್ಟಿ ಪಿಯು ಕಾಲೇಜಿಗೆ 95.39% ಫಲಿತಾಂಶ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಉತ್ತಮ ಸಾಧನೆಗೈದಿದ್ದಾರೆ. ಪರೀಕ್ಷೆ ಬರೆದ ಒಟ್ಟು 304 ವಿದ್ಯಾರ್ಥಿಗಳ ಪೈಕಿ 98 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದರೇ, 167 ಮಂದಿ ಪ್ರಥಮ ದರ್ಜೆಯಲ್ಲಿ ಹಾಗೂ 26 ಮಂದಿ ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 186 ವಿದ್ಯಾರ್ಥಿಗಳ ಪೈಕಿ 174 ಮಂದಿ ತೇರ್ಗಡೆ ಹೊಂದಿದ್ದರೇ, ವಾಣಿಜ್ಯ ವಿಭಾಗದಲ್ಲಿ 118 ವಿದ್ಯಾರ್ಥಿಗಳ ಪೈಕಿ 116 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

Call us

Click Here

ಕಾಲೇಜಿನಲ್ಲಿ ವಿಶಿಷ್ಟ ಸಾಧನೆಗೈದಿರುವ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರಾದ ನವೀನ್‌ಕುಮಾರ್ ಶೆಟ್ಟಿ ಹಾಗೂ ಕುಂದಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಅಭಿನಂದಿಸಿದ್ದಾರೆ.

Leave a Reply