ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಶಿಕ್ಷಣ ಸಂಸ್ಥೆಗಳು

Call us

Call us

Call us

BM-Sukumar-Shettyಕುಂದಾಪ್ರ ಡಾಟ್ ಕಾಂ: ಕುಂದಾಪುರ ಪರಿಸರದಲ್ಲಿ ಗುಣಮಟ್ಟದ ಮತ್ತು ಮೌಲ್ಯಪೂರ್ಣ ಶೈಕ್ಷಣಿಕ ಅವಕಾಶಗಳು ವಿಪುಲವಾಗಿ ತೆರೆದುಕೊಳ್ಳದ ಕಾಲಘಟ್ಟದಲ್ಲಿ ಅಂದರೆ 1975ರ ವೇಳೆಗೆ ಹುಟ್ಟಿಕೊಂಡ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ. ಕುಂದಾಪುರದ ಹೃದಯ ಭಾಗದಲ್ಲಿ ತನ್ನ ನೆಲೆಯನ್ನು ಕಂಡುಕೊಂಡ ಈ ಸೊಸೈಟಿ ಮೊದಲು ಆರಂಭಿಸಿದ್ದು ನರ್ಸರಿ ತರಗತಿಯನ್ನು. ಇಂದು ಅದು ಪದವಿ ಶಿಕ್ಷಣದ ವರೆಗೆ ಬೆಳೆದು ನಿಂತು ರಾಜ್ಯದಾದ್ಯಂತ ತನ್ನ ಕೀರ್ತಿಯನ್ನು ಪಸರಿಸುತ್ತಿದೆ. ಕುಂದಾಪುರ ತಾಲೂಕಿನ ವಿಭಿನ್ನ ಗ್ರಾಮೀಣ ಪ್ರದೇಶಗಳ ಬಡಕುಟುಂಬಗಳನ್ನು ಪ್ರತಿನಿಧಿಸುವ ಪ್ರತಿ ಮಗುವಿಗೂ ಆಂಗ್ಲ ಮಾಧ್ಯಮ ಶಿಕ್ಷಣದ ಅವಕಾಶಗಳನ್ನು ತೆರೆದಿಡಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಜನ್ಮ ತಾಳಿದ ಈ ಸಂಸ್ಥೆ ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಸಾಮಾಜಿಕ ಬದ್ಧತೆಯೊಂದಿಗೆ ನಾಲ್ಕು ಶಿಕ್ಷಣ ಸಂಸ್ಥೆಗಳ ಮೂಲಕ ಶೈಕ್ಷಣಿಕ ಕ್ರಾಂತಿಯೊಂದಕ್ಕೆ ಕಾರಣವಾಗಿದೆ. ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಸಂಸ್ಥೆಗಳಲ್ಲಿ ವಿಪುಲವಾದ ಅವಕಾಶಗಳಿದ್ದು, ಎಲ್ಲಾ ರಂಗದಲ್ಲಿಯೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಂಸ್ಥೆಯು ಗುರುತಿಸಿಕೊಂಡು ಎಲ್ಲರ ಗಮನ ಸೆಳೆದಿದೆ. ಕುಂದಾಪ್ರ ಡಾಟ್ ಕಾಂ.

Call us

Click Here

ಶಿಕ್ಷಣ ಕ್ರಾಂತಿಯ ರೂವಾರಿ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ:
ಕುಂದಾಪುರ ಎಜುಕೇಶನ್ ಸೊಸೈಟಿಯ ಯಶಸ್ಸಿನ ಹಿಂದಿನ ರೂವಾರಿ ಅದರ ಅಧ್ಯಕ್ಷರು ಹಾಗೂ ಸಂಚಾಲಕರಾದ ಶ್ರೀ ಬಿ. ಎಂ ಸುಕುಮಾರ ಶೆಟ್ಟಿಯವರು. ಕುಂದಾಪುರ ಎಜುಕೇಶನ್ ಸೊಸೈಟಿಯ ವ್ಯಾಪ್ತಿಯಲ್ಲಿ ಬರುವ ನಾಲ್ಕು ಸಂಸ್ಥೆಗಳನ್ನು ನಾಡಿನ ಮಾದರಿ ಸಂಸ್ಥೆಯಾಗಿ ರೂಪಿಸಿದ ಹೆಗ್ಗಳಿಕೆ ಇವರದ್ದು. ಸಮಾಜದ ಕಟ್ಟಕಡೆಯ ಮಗುವನ್ನೂ ವಿದ್ಯಾವಂತನನ್ನಾಗಿಸಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಗಲಿರುಳೂ ಶಿಕ್ಷಣ ಸಂಸ್ಥೆಗಳ ಏಳಿಗೆಗಾಗಿ ಶ್ರಮಿಸುತ್ತಿರು ಇವರ ಇಚ್ಛಾಶಕ್ತಿ ಜನಮೆಚ್ಚುಗೆಗೆ ಪಾತ್ರವಾಗಿದೆ. ಶಿಕ್ಷಣದ ಬಗ್ಗೆ ಅಪಾರ ಕಾಳಜಿ, ಕಳಕಳಿ ಹೊಂದಿರುವ ಶ್ರೀಯುತರು ತಮ್ಮ ಯೋಚನೆ, ಯೋಜನೆಗಳನ್ನು ಕಾರ್ಯರೂಪಕ್ಕಿಳಿಸಿ ಶಿಕ್ಷಣ ಸಂಸ್ಥೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದಾರೆ. ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ರೂಪಿಸಿದ ಈ ಸಂಸ್ಥೆಯಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದೇ ಶ್ರೀಯುತರ ದಕ್ಷ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಈ ಎಲ್ಲಾ ಸಂಸ್ಥೆಗಳನ್ನು ಕರ್ನಾಟಕ ರಾಜ್ಯದಲ್ಲಿಯೇ ಮಾದರಿ ಸಂಸ್ಥೆಯನ್ನಾಗಿ ರೂಪಿಸಬೇಕೆಂಬ ಉತ್ಕಟ ಹಂಬಲವನ್ನು ಅವರು ಹೊಂದಿದ್ದಾರೆ/ಕುಂದಾಪ್ರ ಡಾಟ್ ಕಾಂ/

ಸಂಪರ್ಕಿಸಿ:

  • ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ 08254 231292
  • ವಿ.ಕೆ.ಆರ್.ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢ ಶಾಲೆ 08254 231406
  • ಆರ್.ಎನ್. ಶೆಟ್ಟಿ. ಪಿ.ಯು. ಕಾಲೇಜು 08254 231501
  • ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು 08254 235588

Leave a Reply