ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕುಂದಾಪುರ ದಕ್ಷಿಣದ 2016-17 ನೇ ಸಾಲಿನ ಅಧ್ಯಕ್ಷರಾಗಿ ಕೆನರಾ ಕೆಟರರ‍್ಸ್ ಮಾಲಕ ಒಝಲಿನ್ ರೆಬೆಲ್ಲೊ ಆಯ್ಕೆಯಾಗಿದ್ದಾರೆ. ಉತ್ತಮ ಸಮಾಜ ಸೇವಕರು, ಸಂಘಟಕರು ಆಗಿರುವ ಇವರು ಗಂಗೊಳ್ಳಿಯಲ್ಲಿ ಪೆರಿಶ್ ಚರ್ಚ್‌ನ ಕೆಥೋಲಿಕ್ ಸಭಾ ಅಧ್ಯಕ್ಷರಾಗಿ, Iಅಙಒ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪಕ ನಿರ್ದೇಶಕರಾಗಿ,ವಂದೇ ಮಾತರಂ ವಿವಿಧ್ದೋದೇಶ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಕಾರ್ಯದರ್ಶಿ ಫ್ಲೈವನ್ ಡಿ’ಸೋಜಾ ನೇಮಕಗೊಂಡಿದ್ದಾರೆ.
ಸುನಿಲ್ ಹೆಚ್. ಜಿ. ಬೈಂದೂರು
ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.





